ಮೇ 31 ರವರೆಗೆ ಲಾಕ್ ಡೌನ್ 4.0

ನವದೆಹಲಿ: ಕೇಂದ್ರ ಸರಕಾರ ಮೇ 31 ರವರೆಗೆ ಲಾಕ್ ಡೌನ್ 4.0 ಘೋಷಣೆ ಮಾಡಿ ಆದೇಶ ಹೊರಡಿಸಿದೆ. ದೇಶದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನಲೆ ಲಾಕ್‌ಡೌನ್ ಅವಧಿಯನ್ನು ಇದೇ ಮೇ.31 ರವರೆಗೆ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ(NDMA) ಆದೇಶ ಹೊರಡಿಸಿದ್ದು, ಮೇ. 31ರವರೆಗೆ ಅಂದರೆ ಎರಡು ವಾರಗಳ ಕಾಲ ಲಾಕ್‌ಡೌನ್ ಅವಧಿ ವಿಸ್ತರಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ.

ಇಂದು ಮೂರನೇ ಹಂತದ ಲಾಕ್‌ಡೌನ್ ಮುಕ್ತಾಯಗೊಂಡಿದ್ದು, ನಾಳೆಯಿಂದ ಹೊಸ ಮಾರ್ಗಸೂಚಿಗಳೊಂದಿಗೆ ನಾಲ್ಕನೇ ಹಂತದ ಲಾಕ್‌ಡೌನ್ ಜಾರಿಗೆ ಬರಲಿದೆ ಎಂಬುದು ಖಚಿತವಾಗಿದೆ.

ಇನ್ನು ಲಾಕ್‌ಡೌನ್ 4.0ಗೆ ಸಂಬಂಧಿಸಿದ ಮಾರ್ಗಸೂಚಿಗಳ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ಕೇಂದ್ರ ಗೃಹ ಸಚಿವಾಲಯ ಇನ್ನೇನು ಕೆಲವೇ ಕ್ಷಣಗಳಲ್ಲಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದೆ.