Connect with us

LATEST NEWS

ದಕ್ಷಿಣಕನ್ನಡ ಲಾಕ್ ಡೌನ್ ಮಾರ್ಗಸೂಚಿ – ಪ್ರತಿದಿನ ಬೆಳಿಗ್ಗೆ 8 ರಿಂದ 11 ರವರೆಗೆ ದಿನಸಿ, ತರಕಾರಿ ಅಂಗಡಿ ಓಪನ್

ಮಂಗಳೂರು, ಜುಲೈ 14: ಕೊರೊನಾ ಸೊಂಕು ನಿಗ್ರಹಿಸಲು ಮುಂಜಾಗೃತ ಕ್ರಮವಾಗಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜುಲೈ 15 ರ ಬುಧವಾರ ರಾತ್ರಿ 8 ಗಂಟೆಯಿಂದ ಜುಲೈ 23ರ ಬೆಳಗ್ಗೆ 5 ಗಂಟೆಯವರೆಗೂ ಏಳು ದಿನಗಳ ಅವಧಿಗೆ ಲಾಕ್ ಡೌನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.


ಈ ಲಾಕ್ ಡೌನ್ ಸಂದರ್ಭದಲ್ಲಿ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ಇಂದು ಬಿಡುಗಡೆ ಮಾಡಲಾಗಿದ್ದು, ಆಹಾರ ,ಹಾಗೂ ಹಣ್ಣು ತರಕಾರಿಗೆ ಖರೀದಿಗೆ ಬೆಳಗ್ಗೆ 8ರಿಂದ ಮಧ್ಯಾಹ್ನ 11 ಗಂಟೆಯವರೆಗೆ ಅವಕಾಶ ನೀಡಲಾಗಿದ್ದು , ತುರ್ತು ಸಂದರ್ಭದಲ್ಲಿ ಮತ್ತು ವೈದ್ಯಕೀಯ ತುರ್ತು ಸೇವೆಗಳ ಪ್ರಯಾಣಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಎಲ್ಲ ರೀತಿಯ ಸಾರಿಗೆ ಸಂಚಾರ, ವಾಣಿಜ್ಯ ಮತ್ತು ಖಾಸಗಿ ಸಂಸ್ಥೆಗಳು, ಬಾರ್ , ಮಾಲ್, ಹೊಟೇಲ್ ಮತ್ತಿತರ ಎಲ್ಲಾ ವ್ಯವಹಾರ ಸಂಪೂರ್ಣ ಬಂದ್, ಇನ್ನು ಕಂಟೈನ್ ಮೆಂಟ್ ವಲಯಗಳು ಸಂಪೂರ್ಣ ಬಂದ್ ಆಗಲಿವೆ.

Facebook Comments

comments