Connect with us

MANGALORE

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಒಂದು ವಾರ ಲಾಕ್ ಡೌನ್ ಜಾರಿಗೆ ಚಿಂತನೆ

ಮಂಗಳೂರು, ಜುಲೈ 12 : ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ವಿಪರೀತವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಲಾಕ್ ಡೌನ್ ಜಾರಿಗೆ ತರಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.

ಮಂಗಳವಾರ ರಾತ್ರಿಯಿಂದ ಒಂದು ವಾರ ಕಾಲ ಲಾಕ್ ಡೌನ್ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಸೋಮವಾರ ಅಧಿಕೃತವಾಗಿ ತಿಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.

ಮಂಗಳೂರಿನಲ್ಲಿ ಜುಲೈ 3ರಿಂದ 11 ರ ನಡುವೆ ಸೋಂಕಿತ ಪ್ರಕರಣ ದುಪ್ಪಟ್ಟು ಆಗಿದ್ದು ಜಿಲ್ಲಾಡಳಿತಕ್ಕೆ ತಲೆನೋವು ತರಿಸಿದೆ. ಹೀಗೆ ಮುಂದುವರಿದರೆ ಇನ್ನು ಹತ್ತು ದಿನದಲ್ಲಿ ಪ್ರಕರಣ ನಾಲ್ಕು ಸಾವಿರ ಆಗುವ ಸಾಧ್ಯತೆಯಿದೆ ಎನ್ನಲಾಗ್ತಿದೆ. ಹೀಗಾಗಿ ಬೆಂಗಳೂರಿನ ಲಾಕ್ ಡೌನ್ ಮಾದರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಒಂದು ವಾರ ಕಾಲ ಲಾಕ್ ಡೌನ್ ಜಾರಿಗೆ ತರಲು ನಿರ್ಧರಿಸಲಾಗಿದೆ.