Connect with us

KARNATAKA

ಲಾಕ್ ಡೌನ್ ನಷ್ಟ – ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಶವವಾಗಿ ಪತ್ತೆ!

ಶಿವಮೊಗ್ಗ : ಲಾಕ್ ಡೌನ್ ನಿಂದಾಗಿ ವ್ಯವಹಾರದಲ್ಲಿ ಉಂಟಾದ ನಷ್ಟದಿಂದಾಗಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಪ್ರಕಾಶ್ ಟ್ರಾವೆಲ್ಸ್ ಮಾಲೀಕರಾಗಿದ್ದ ಪ್ರಕಾಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಲಾಗಿದ್ದು, ಅರ ಮೃತ ದೇಹ ಪತ್ತೆಯಾಗಿದೆ.

ಜನವರಿ 21ರ ಸಂಜೆ ನಿಗೂಢವಾಗಿ ನಾಪತ್ತೆಯಾಗಿದ್ದ ಅವರ ಕಾರು, ಮೊಬೈಲ್ ಫೋನ್ ಹೊಸನಗರ ತಾಲೂಕಿನ ಪಟಗುಪ್ಪೆ ಸೇತುವೆ ಮೇಲೆ ಪತ್ತೆಯಾಗಿತ್ತು. ಕಾರಿನಿಂದ ಸ್ವಲ್ಪ ದೂರದಲ್ಲಿ ಸೇತುವೆ ಮೇಲೆ ಚಪ್ಪಲಿ ಕೂಡ ಸಿಕ್ಕಿತ್ತು.
ಶಿವಮೊಗ್ಗದ ಸಾಗರ ಭಾಗದಲ್ಲಿ ಸುಮಾರು 20 ವರ್ಷದಿಂದ ಬಸ್​ಗಳ ಸೇವೆ ಒದಗಿಸುತ್ತಿದೆ ಪ್ರಕಾಶ್ ಟ್ರಾವೆಲ್ಸ್. ಕರೊನಾ ಲಾಕ್​ಡೌನ್ ಆದ ಬಳಿಕ ಪ್ರಕಾಶ್ ಟ್ರಾವೆಲ್ಸ್ ಸಂಸ್ಥೆಗೆ ದೊಡ್ಡ ಪ್ರಮಾಣದ ನಷ್ಟ ಸಂಭವಿಸಿತ್ತು ಎನ್ನಲಾಗಿದೆ. ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸ್​ ತನಿಖೆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ. ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.

 

Advertisement
Click to comment

You must be logged in to post a comment Login

Leave a Reply