Connect with us

LATEST NEWS

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸೊಂಕು ಹೆಚ್ಚಿರುವ ಪ್ರದೇಶಗಳು ಸಂಪೂರ್ಣ ಲಾಕ್ ಡೌನ್ – ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು, ಜೂನ್ 12: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಕಠಿಣ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದ್ದು, ಜಿಲ್ಲೆಯ ಯಾವ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಸೋಂಕು ಹೆಚ್ಚಿರುವುದು ಕಂಡುಬರುತ್ತಿದೆಯೋ ಆ ವ್ಯಾಪ್ತಿಯ ಪ್ರದೇಶವನ್ನು ಪೂರ್ಣ ಪ್ರಮಾಣದಲ್ಲಿ ಲಾಕ್‍ಡೌನ್ ವಿಧಿಸಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕೆಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ.


ಜಿಲ್ಲೆಯಾದ್ಯಂತ ಕೊರೋನಾ ಸೋಂಕಿನ ಪ್ರಮಾಣವು ನಿಗಧಿತ ದರದಲ್ಲಿ ಕಡಿಮೆಯಾಗಿಲ್ಲ ಇದರ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ಸೋಂಕಿನ ಪ್ರಮಾಣವನ್ನು ಗಣನೀಯವಾಗಿ ಕಡಿಮೆಯಾಗುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸೋಂಕು ಹೊಂದಿರುವವರ ಮನೆಗಳನ್ನು ತಪ್ಪದೇ ಸೀಲ್‍ಡೌನ್ ಮಾಡಬೇಕು. 5 ಕ್ಕಿಂತ ಹೆಚ್ಚು ಪ್ರಕರಣಗಳು ಗ್ರಾಮಗಳಲ್ಲಿ ಕಂಡುಬಂದಲ್ಲಿ ಕಂಟೈನ್‍ಮೆಂಟ್ ಜೋನ್‍ಗಳೆಂದು ಘೋಷಿಸಬೇಕು ಎಂದರು. ಕೋವಿಡ್ ದೃಢ ಪ್ರಮಾಣವು ಮಂಗಳೂರು ತಾಲೂಕಿನಲ್ಲಿ ಶೇ.15, ಬಂಟ್ವಾಳದಲ್ಲಿ ಶೇ.12, ಬೆಳ್ತಂಗಡಿಯಲ್ಲಿ ಶೇ.24, ಪುತ್ತೂರಿನಲ್ಲಿ ಶೇ.22, ಸುಳ್ಯದಲ್ಲಿ ಶೇ.27 ರಷ್ಟಿದೆ ಎಂದ ಅವರು, ಕೋವಿಡ್ ಪರೀಕ್ಷೆಗಳನ್ನು ಹೆಚ್ಚು ಹೆಚ್ಚು ಮಾಡಬೇಕು. ಬಂಟ್ವಾಳ ತಾಲೂಕಿನಲ್ಲಿ ಹಳ್ಳಿಯ ಕಡೆ ವೈದ್ಯರ ನಡೆ ಕಾರ್ಯಕ್ರಮವು ಉತ್ತಮವಾಗಿ ನಡೆಯುತ್ತಿದೆ ಅದೇ ರೀತಿ ಇತರೆ ತಾಲೂಕುಗಳಲ್ಲಿಯೂ ಸಹ ಪರಿಣಾಮಕಾರಿಯಾಗಿ ಆಗಬೇಕು ಎಂದರು.

ಲಾಕ್‍ಡೌನ್ ಅವಧಿಯಲ್ಲಿ ಬ್ಯಾಂಕಿಂಗ್‍ನ ಕಾರ್ಯಚಟುವಟಿಕೆಗಳು ಬೆಳಿಗ್ಗೆ 8 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾಡಲು ಅವಕಾಶ ಮಾಡಿಕೊಡಬೇಕು. ಅಗತ್ಯ ವಸ್ತುಗಳ ಖರೀದಿಗೆ ನೀಡಿರುವ ಅವಧಿಯಲ್ಲಿ ಕನ್ನಡಕ ಮಾರಾಟ ಅಂಗಡಿ ಹಾಗೂ ಅವುಗಳ ರಿಪೇರಿ ಅಂಗಡಿಗಳಿಗೆ, ಗ್ಯಾರೇಜು ಹಾಗೂ ವಾಹನಗಳ ಸರ್ವಿಸ್ ಸೆಂಟರ್ ತೆರೆಯಲು ಅವಕಾಶ ಮಾಡಿಕೊಡಬೇಕು ಎಂದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *