LATEST NEWS
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 4 ರಿಂದ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ಲಾಕ್ ಡೌನ್ ಸ್ವಲ್ಪ ಸಡಿಲಿಕೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 4 ರಿಂದ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ಲಾಕ್ ಡೌನ್ ಸ್ವಲ್ಪ ಸಡಿಲಿಕೆ
ಮಂಗಳೂರು, ಮೇ 03: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಬೆಳಿಗ್ಗೆ 7 ರಿಂದ ಸಂಜೆ 7 ರ ವರೆಗೆ ಲಾಕ್ ಡೌನ್ ನಲ್ಲಿ ಸ್ವಲ್ಪ ಸಡಿಲಿಕೆ ಮಾಡಲಾಗಿದೆ. ಈ ಕುರಿತಂತೆ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಆದೇಶ ಹೊರಡಿಸಿದ್ದು, ಕಂಟೈನ್ ಮೆಂಟ್ ಝೋನ್ ಹೊರತು ಪಡಿಸಿ ಜಿಲ್ಲೆಯ ಉಳಿದ ಕಡೆ ಪಾಸ್ ಇಲ್ಲದೆ ವಾಹನ ಓಡಾಟಕ್ಕೆ ಅನುಮತಿ ನೀಡಲಾಗಿದ್ದು, ಸಾಮಾಜಿ ಅಂತರ ಕಾಯ್ದುಕೊಂಡು ಕೆಲವು ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ಕಲ್ಪಿಸಲಾಗಿದೆ.
ಹೆಚ್ಚು ಜನರು ಒಮ್ಮೆಲೇ ಸೇರುವ ಕಾರಣದಿಂದಾಗಿ ಮಾಲ್, ಸೆಲೂನ್, ಬಾರ್, ರೆಸ್ಟೂರೆಂಟ್, ಬ್ಯೂಟಿಪಾರ್ಲರ್, ದಂತ ಚಿಕಿತ್ಸಾಲಯಕ್ಕೆ ಅವಕಾಶ ನೀಡಲಾಗುವುದಿಲ್ಲ. ಉಳಿದಂತೆ ಎಲ್ಲಾ ಅಂಗಡಿ ಮುಗ್ಗಟ್ಟುಗಳು ತೆರೆಯಲು ಅವಕಾಶ ನೀಡಲಾಗಿದೆ.
ವಾಹನಗಳಲ್ಲಿ ಓಡಾಟಕ್ಕೆ ಪಾಸ್‌ನ ಅವಶ್ಯಕತೆಯಿಲ್ಲ. ಆದರೆ ಬೇರೆ ಜಿಲ್ಲೆಗಳಿಗೆ ಹೋಗಬೇಕಾದ್ದಲ್ಲಿ ಪಾಸ್ ಬೇಕು. ಬಸ್‌ಗಳ ಓಡಾಟಕ್ಕೆ ಅವಕಾಶ ನೀಡಿಲ್ಲ. ಆಟೋ ರಿಕ್ಷಾಗಳು, ಬೈಕ್‌ಗಳ ಸಂಚಾರಕ್ಕೆ ಅವಕಾಶವಿದೆ. ಬೈಕ್ ನಲ್ಲಿ ಒಬ್ಬರಿಗೆ ಮಾತ್ರ ಸಂಚಾರಕ್ಕೆ ಅವಕಾಶ, ಆಟೋ ರಿಕ್ಷಾದಲ್ಲಿ 1+2 ಹಾಗೂ ಕಾರಿನಲ್ಲಿ 2+2 ಗೆ ಅವಕಾಶ ನೀಡಲಾಗಿದೆ.
ಜಿಲ್ಲೆಯ ಖಾಸಗಿ ಸಂಸ್ಥೆ ಮತ್ತು ಕಚೇರಿಗಳಲ್ಲಿ ಶೇಕಡ 33 ರಷ್ಟು ಸಿಬ್ಬಂದಿಗಳನ್ನು ಬಳಸಿ ಕೆಲಸಕ್ಕೆ ಅನುಮತಿ ನೀಡಲಾಗಿದ್ದು, ಅಗತ್ಯ ಕಟ್ಟಡ ಕಾಮಗಾರಿ ನಡೆಸಲು ಅವಕಾಶ ಸ್ಥಳದಲ್ಲಿದ್ದ ಕಾರ್ಮಿಕರು ಬಳಕೆಗೆ ಸೂಚನೆ, ಮಾರುಕಟ್ಟೆ ಮತ್ತು ಮಾರುಕಟ್ಟೆ ಸಂಕೀರ್ಣಗಳಲ್ಲಿ ಅಗತ್ಯ ವಸ್ತುಗಳ ಶಾಪ್ ತೆರೆಯಲು ಅನುಮತಿ ನೀಡಲಾಗಿದೆ.
ಸಂಜೆ 7 ರಿಂದ ಬೆಳಿಗ್ಗೆ 7 ರ ವರೆಗೆ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಆಗಲಿದ್ದು, ಈ ಸಂದರ್ಭದಲ್ಲಿ ಯಾವುದೇ ರೀತಿಯ ಸಂಚಾರಕ್ಕೆ ಅವಕಾಶ ಇಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ. ಆದರೆ ಕೊರೊನಾ ಕಂಟೈನ್ ಮೆಂಟ್ ಝೋನ್ ಗಳಲ್ಲಿ ಎಂದಿನಂತೆ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿಯಲ್ಲಿರುತ್ತದೆ.