BELTHANGADI
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ – ನಾಳೆ ಅಧಿಕೃತ ಆದೇಶ ಸಾಧ್ಯತೆ – ಕೋಟ

ಬೆಳ್ತಂಗಡಿ ಜೂನ್ 30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಇಳಿಕೆಯಲ್ಲಿರುವ ಹಿನ್ನಲೆ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ಬಗ್ಗೆ ಜುಲೈ 1 ರಂದು ಸರಕಾರದ ಅಧಿಕೃತ ಆದೇಶ ಬರುವ ಸಾಧ್ಯತೆ ಇದೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಕೊರೋನ ಪಾಸಿಟಿವಿಟಿ ರೇಟ್ ಐದರ ಕೆಳಗೆ ಬಂದಿದೆ. ಈ ಹಿನ್ನೆಲೆ ಜಿಲ್ಲೆಯಲ್ಲಿ ಬೆಳಗ್ಗೆ ಏಳು ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಅಂಗಡಿಗಳನ್ನು ತೆರೆಯಲು ಹಾಗೂ ಬಸ್ಸುಗಳ ಸಂಚಾರಕ್ಕೆ ಅವಕಾಶ ನೀಡಿ ಲಾಕ್ಡೌನ್ ಸಡಿಲಿಕೆ ಮಾಡಲಾಗುವುದು. ಈ ಬಗ್ಗೆ ಈಗಾಗಲೆ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇಂದು ಸಂಜೆ ಅಥವಾ ನಾಳೆ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಅವರು ತಿಳಿಸಿದರು.
