Connect with us

    LATEST NEWS

    ಉಡುಪಿ ಜಿಲ್ಲೆಯ ಕೊರೊನಾ ಪಾಸಿಟಿವಿ ರೇಟ್ 6ಕ್ಕೆ ಇಳಿಕೆ…ನಾಳೆಯಿಂದ ಲಾಕ್ ಡೌನ್ ನಲ್ಲಿ ಸಡಿಲಿಕೆ

    ಉಡುಪಿ ಜೂನ್ 13: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ 6 ಕ್ಕೆ ಇಳಿಕೆಯಾಗಿದ್ದು, ನಾಳೆಯಿಂದ ಜಿಲ್ಲೆಯಲ್ಲಿ ಅನ್ಲಾಕ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದ್ದಾರೆ.


    ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು ಉಡುಪಿಯಲ್ಲಿ ಕೊರೊನಾ ಪ್ರಕರಣಗಳು ಇಳಿಮುಖವಾಗಿದ್ದು, ಕೊರೊನಾ ಪಾಸಿಟಿವಿಟಿ ರೇಟ್ ಶೇಕಡ 6 ಕ್ಕೆ ಇಳಿಕೆಯಾಗಿದೆ. ಜಿಲ್ಲೆಯಲ್ಲಿ ನಿನ್ನೆ 258 ಕೊರೊನಾ ಪ್ರಕರಣ ದಾಖಲಾಗಿದ್ದು. ಓರ್ವ ಯುವತಿ ಹಾಗೂ ವೃದ್ಧೆ ಕೊರೊನಾಗೆ ಬಲಿಯಾಗಿದ್ದಾರೆ.

    ಈಗಾಗಲೇ ರಾಜ್ಯಸರಕಾರ ಲಾಕ್ ಡೌನ್ ನಲ್ಲಿ ಕೆಲವು ಸಡಿಲಿಕೆ ನೀಡಿದ್ದು, ನಾಳೆಯಿಂದ ಜಾರಿಗೆ ಬರಲಿದ್ದು, ಸೋಮವಾರ ದಿಂದ ಶುಕ್ರವಾರದ ವರೆಗೆ ಪ್ರತಿದಿನ ಬೆಳಗ್ಗೆ 6 ರಿಂದ 2 ಗಂಟೆಯವರೆಗೆ, ಎಲ್ಲಾ ಉತ್ಪಾದನಾ ಚಟುವಟಿಕೆ ನಿರ್ವಹಿಸುವ ಕೈಗಾರಿಕೆಗಳು, ಸಂಸ್ಥೆಗಳು ಶೇ.50 ರಷ್ಟು ಕಾರ್ಮಿಕರೊಂದಿಗೆ ಕಾರ್ಯನಿರ್ವಹಿಸಬಹುದು. ಗಾರ್ಮೆಂಟ್ ಗಳಲ್ಲಿ ಮಾತ್ರ ಶೇ.30 ಸಿಬ್ಬಂದಿ ಕಾರ್ಯನಿರ್ವಹಿಸಬಹುದು. ಕಟ್ಟಡ ನಿರ್ಮಾಣ ಮತ್ತು ರಿಪೇರಿ ಚಟುವಟಿಕೆಗಳಿಗೆ ಅಗತ್ಯವಿರುವ ಕಟ್ಟಡ ಸಾಮಗ್ರಿ ಗಳಾದ ಸಿಮೆಂಟ್ , ಕಬ್ಬಿಣ ಸೇರಿದಂತೆ ಅಗತ್ಯವಿರುವ ವಸ್ತುಗಳ ಮಾರಾಟ ಮಳಿಗೆಗಳು ತೆರೆಯಲು ಅವಕಾಶವಿದೆ.

    ಆಹಾರ ಪದಾರ್ಥಗಳು, ದಿನಸಿ ವಸ್ತುಗಳು, ಹಣ್ಣು ಮತ್ತು ತರಕಾರಿ, ಮೀನು ಮತ್ತು ಮಾಂಸ ಡೈರಿ ಮತ್ತು ಹಾಲಿನ ಬೂತ್ ಗಳು ತೆರೆಯಲು ಮತ್ತು ಪಶು ಆಹಾರ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಬೀದಿ ಬದಿ ವ್ಯಾಪಾರಿಗಳು ಹಾಗೂ ಪಡಿತರ ಅಂಗಡಿಗಳು ಸಹ ಈ ಸಮಯದಲ್ಲಿ ಕಾರ್ಯನಿರ್ವಹಿಸಬಹುದು ಆದರೆ ಬೀದಿ ಬದಿ ವ್ಯಾಪಾರಿಗಳು ಯಾವುದೇ ಆಹಾರ ಪದಾರ್ಥಗಳನ್ನು ಮಾರುವಂತಿಲ್ಲ. ಬಾರ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಮದ್ಯ ಪಾರ್ಸೆಲ್ ಗೆ ಅವಕಾಶವಿದೆ. ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಗೆ ಮಾತ್ರ ಅನುಮತಿ ನೀಡಲಾಗಿದೆ. ಹೋಂ ಡೆಲಿವರಿ ಸೇವೆ ಒದಗಿಸುವವರಿಗೆ ಈ ಹಿಂದಿನAತೆ ಯಾವುದೇ ನಿರ್ಭಂಧಗಳಿಲ್ಲ ಎಂದರು. ಇದನ್ನು ಹೊರತುಪಡಿಸಿ ಇತರೇ ಯವುದೇ ಅಂಗಡಿಗಳನ್ನು ತೆರೆಯಲು ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟವಾಗಿ ತಿಳಿಸಿದರು.

    ಮದುವೆಗೆ 40 ಜನರಿಗೆ ಮಾತ್ರ ಅವಕಾಶ ಇದ್ದು, ಮದುವೆ ಕಾರ್ಯಕ್ರಮಗಳಿಗೆ ಪರ್ಮಿಶನ್ ನೀಡಲು ತಹಶಿಲ್ದಾರ್ ಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

     

    Share Information
    Advertisement
    Click to comment

    You must be logged in to post a comment Login

    Leave a Reply