Connect with us

KARNATAKA

ಲೋಕಸಮರ @24 : ರಾಜ್ಯಕ್ಕೆ ಇಂದು ಪ್ರಧಾನಿ ಮೋದಿ , ಖರ್ಗೆ ನೆಲದಿಂದಲೇ ಪ್ರಚಾರಕ್ಕೆ ರಣಕಹಳೆ..!

ಕಲಬುರಗಿ : ರಾಜ್ಯಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸಿಲಿದ್ದು ಅಧಿಕೃತವಾಗಿ ಪ್ರಚಾರ ಆರಂಭಿಸಲಿದ್ದಾರೆ. ಈ ಬಾರಿ 400 ಸ್ಥಾನಗಳ ಗುರಿ ಇಟ್ಟುಕೊಂಡಿರುವ ಮೋದಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ನೆಲದಿಂದಲೇ ಚುನಾವಣಾ ಪ್ರಚಾರ ಆರಂಭಿಸುವ ಮೂಲಕ ಪ್ರಚಾರದ ರಣಕಹಳೆ ಊದಲಿದ್ದಾರೆ.

ಇಂದು ಶನಿವಾರ ಮಧ್ಯಾಹ್ನ 1 ಗಂಟೆಗೆ ಆಗಮಿಸಲಿರುವ ಮೋದಿ ಆರಂಭದಲ್ಲಿ ರೋಡ್ ಶೋ ನಡೆಸಲಿದ್ದು ಬಳಿಕ 2 ಗಂಟೆಗೆ ಕಲಬುರಗಿಯ ಎನ್‌.ವಿ. ಮೈದಾನದಲ್ಲಿ ನಡೆಯುವ ಬೃಹತ್‌ ಸಮಾವೇಶದಲ್ಲಿ ಮಾತನಾಡಲಿದ್ದಾರೆ.ಮೋದಿ ಅವರು ರೋಡ್ ಶೋ ನಡೆಸುವ ರಸ್ತೆಯುದ್ದಕ್ಕೂ ಬ್ಯಾರಿಕೇಡ್‌ ಅಳವಡಿಸಲಾಗಿದೆ.ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಖಾಕಿ ಪಡೆ ಹೈ ಅಲರ್ಟ್ ಆಗಿದ್ದು, ನಗರದಾದ್ಯಂತ ಪೊಲೀಸ್ ಸರ್ಪಗಾವಲು ಇರಿಸಲಾಗಿದೆ.

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಬಾಂಬರ್ ಕಲಬುರಗಿ ಗೆ ಬಂದು ಹೋಗಿರುವ ಶಂಕೆ ಹಿನ್ನೆಲೆಯಲ್ಲಿ ಮತ್ತಷ್ಟು ಅಲರ್ಟ್‌ ಘೋಷಿಸಲಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ 25+1 ಸ್ಥಾನಗಳಲ್ಲಿ ಗೆದ್ದಿದ್ದ ಬಿಜೆಪಿ ಈ ಬಾರಿ ಎಲ್ಲ 28 ಸ್ಥಾನಗಳನ್ನು ಗೆಲ್ಲುವ ಟಾರ್ಗೆಟ್‌ ಇಟ್ಟುಕೊಂಡಿದೆ. 2019ರಲ್ಲೂ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ತವರು ನೆಲವಾದ ಕಲಬುರಗಿಯಿಂದ ರಾಜ್ಯದ ಪ್ರಚಾರವನ್ನು ಆರಂಭಿಸಿದ್ದ ಅವರು ಈ ಬಾರಿಯೂ ಅದೇ ಹೆಜ್ಜೆ ಇಟ್ಟಿದ್ದಾರೆ. ಕಳೆದ ಬಾರಿ ಕಲಬುರಗಿಯಲ್ಲಿ ಅಭ್ಯರ್ಥಿಯಾಗಿದ್ದ ಖರ್ಗೆ ಅವರಿಗೂ ಮೋದಿ ಅಬ್ಬರದಲ್ಲಿ ಸೋಲಾಗಿತ್ತು.

https://x.com/narendramodi/status/1768837705662710121?s=20

Share Information
Continue Reading
Advertisement
Click to comment

Leave a Reply

Your email address will not be published. Required fields are marked *