LATEST NEWS
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಮೊದಲ ಗೆಲವು – ಸೂರತ್ ಕ್ಷೇತ್ರದ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧ ಆಯ್ಕೆ
ಗುಜರಾತ್ ಎಪ್ರಿಲ್ 22: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಮೊದಲ ಗೆಲುವನ್ನು ಸಾಧಿಸಿದ್ದು, ಇನ್ನೂ ಚುನವಾಣೆಯ ಮೊದಲ ಹಂತವಷ್ಟೇ ಮುಗಿದಿದ್ದು ಅಷ್ಟರಲ್ಲೇ ಬಿಜೆಪಿ ಮೊದಲ ಗೆಲವನ್ನ ಸಾಧಿಸಿದೆ.
2024ರ ಲೋಕಸಭಾ ಚುನಾವಣೆಯಲ್ಲಿ ಸೂರತ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ತಿರಸ್ಕೃತಗೊಂಡಿತ್ತು. ಅಲ್ಲದೇ ನಾಮಪತ್ರ ಸಲ್ಲಿಸಿದ್ದ ಉಳಿದ 8 ಮಂದಿ ಸ್ವತಂತ್ರ ಅಭ್ಯರ್ಥಿಗಳೂ ಹಿಂದೆ ಸರಿದಿದ್ದರು. ಹೀಗಾಗಿ ಮತದಾನ ನಡೆಯದೇ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರು ನಾಮಪತ್ರ ಸಲ್ಲಿಸಿದ್ದರು. ಆದರೆ ನಾಮಪತ್ರದಲ್ಲಿನ ಸಹಿಗಳು ತಮ್ಮದಲ್ಲ ಎಂದು ಮೂವರು ಸೂಚಕರು ವಕೀಲರ ಮೂಲಕ ಚುನಾವಣಾಧಿಕಾರಿಗೆ ಪ್ರಮಾಣ ಪತ್ರ ಸಲ್ಲಿಸಿದ್ದರು. ಈ ಮನವಿಯನ್ನು ಪುರಸ್ಕರಿಸಿದ್ದ ಚುನಾವಣಾಧಿಕಾರಿಗಳು ಸಹಿಯನ್ನು ಪರಿಶೀಲಿಸಿದ್ದರು. ಪರಿಶೀಲಿಸಿದ ಬಳಿಕ ನಾಮಪತ್ರಗಳಲ್ಲಿನ ಸೂಚಕರ ಸಹಿಯಲ್ಲಿ ವ್ಯತ್ಯಾಸಗಳಿದ್ದವು ಮತ್ತು ಅವು ನಿಜವಲ್ಲ ಎಂದು ತಿಳಿದುಬಂದಿದ್ದರಿಂದ ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ ಎಂದು ಚುನಾವಣಾಧಿಕಾರಿ ಸೌರಭ್ ಪರ್ಧಿ ತಿಳಿಸಿದ್ದಾರೆ.