Connect with us

  KARNATAKA

  ಲೋಕಸಮರ@24: ಇಂದು ಪ್ರಧಾನಿ ಮೋದಿ ಮಲೆನಾಡಿಗೆ, ಶಿವಮೊಗ್ಗ ಅಲ್ಲಮಪ್ರಭು ಮೈದಾನದಲ್ಲಿ ಸಮಾವೇಶದಲ್ಲಿ ಭಾಗಿ..!

  ಶಿವಮೊಗ್ಗ: ಇಂದು ಪ್ರಧಾನಿ ನರೇಂದ್ರ ಮೋದಿ ಮಲೆನಾಡು ಶಿವಮೊಗ್ಗಕ್ಕೆ ಆಗಮಿಸಲಿದ್ದು ಈ ಹಿನ್ನೆಲೆಯಲ್ಲಿ ನಗರ ಪೂರ್ತಿ ಕಮಲಮಯವಾಗಿದೆ.

  ಕೇರಳದಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಅಪರಾಹ್ನ 1:30ಕ್ಕೆ ಶಿವಮೊಗ್ಗದ ಏರ್​ಪೋರ್ಟ್​ಗೆ ಬಂದಿಳಿಯಲಿದ್ದು ಅಲ್ಲಿಂದ ಅಲ್ಲಮಪ್ರಭು ಮೈದಾನದವರೆಗೆ ಸುಮಾರು 14 ಕಿ.ಮೀ ಜಿರೋ ಟ್ರಾಫಿಕ್​ನಲ್ಲಿ ಆಗಮಿಸಲಿದ್ದಾರೆ. ಸಮಾವೇಶದಲ್ಲಿ 2 ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ನಿರೀಕ್ಷೆ ಇದೆ. ಪ್ರಧಾನಿ ಆಗಮನ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಪೂರ್ತಿ ಖಾಕಿ ಸರ್ಪಗಾವಲು ಹಾಕಲಾಗಿದೆ. ಜೊತೆಗೆ ಆಯಾಕಟ್ಟಿ ಪ್ರದೇಶಗಳಲ್ಲಿ ಕ್ಷೀಪ್ರ ಕಾರ್ಯಾಚರಣೆ ಪಡೆ, ಅರೆ ಸೇನಾ ಪಡೆಯನ್ನು ನಿಯೋಜಿಸಲಾಗಿದೆ.

  ಮೋದಿ ಆಗಮನ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳು ಕೆಲಕಾಲ ಜಿರೋ ಟ್ರಾಫಿಕ್​ಗಾಗಿ ಬಂದ್ ಆಗಲಿವೆ. ಪ್ರಧಾನಿ ಮೋದಿ ಶಿವಮೊಗ್ಗದಲ್ಲಿ 2.5 ಲಕ್ಷಕ್ಕೂ ಅಧಿಕ ಜನರನ್ನುದ್ದೇಶಿಸಿ ಚುನಾವಣಾ ಭಾಷಣ ಮಾಡಲಿದ್ದಾರೆ ಎಂದು ರಾಜ್ಯ ಬಿಜೆಪಿಯ ಮುಖ್ಯ ಸಚೇತಕ ಎನ್ ರವಿ ಕುಮಾರ್ ತಿಳಿಸಿದ್ದಾರೆ. ಶಿವಮೊಗ್ಗದ ಸಂಸದ ಬಿ.ವೈ. ರಾಘವೇಂದ್ರ, ಚಿತ್ರದುರ್ಗದ ಸಂಸದ ನಾರಾಯಣಸ್ವಾಮಿ, ದಾವಣಗೆರೆಯ ಸಂಸದ ಸಿದ್ದೇಶ್ವರ್, ಗಾಯತ್ರಿ ಸಿದ್ದೇಶ್ವರ್, ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರಿನ ಅಭ್ಯರ್ಥಿ ಬ್ರಜೇಶ್ ಚೌಟ. ಶಾಸಕರು, ಮಾಜಿ ಶಾಸಕರುಗಳು, ಬಿ.ಎಸ್. ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಆರಗ ಜ್ಞಾನೇಂದ್ರ ಸೇರಿದಂತೆ ಇತರರು ವೇದಿಕೆ ಮೇಲೆ ಇರಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply