Connect with us

    DAKSHINA KANNADA

    ಲೋಕಸಭೆ ಚುನಾವಣೆ ರಾಷ್ಟ್ರ ಭಕ್ತರ ಹಾಗೂ ದೇಶ ದ್ರೋಹಿಗಳ ನಡುವಿನ ಚುನಾವಣೆ – ಬ್ರಿಜೇಶ್ ಚೌಟ

    ಪುತ್ತೂರು ಮಾರ್ಚ್ 22 : ರಾಷ್ಟ್ರ ಭಕ್ತರ ಹಾಗೂ ದೇಶ ದ್ರೋಹಿಗಳ ನಡುವಿನ ಚುನಾವಣೆಯಾಗಿದ್ದು, ರಾಷ್ಟ್ರದಲ್ಲಿ ಹಿಂದುತ್ವವನ್ನು ಪ್ರತಿಷ್ಠಾಪನೆ ಮಾಡಲು 2024ರ ಚುನಾವಣೆ ಪ್ರಾಮುಖ್ಯತೆಯನ್ನು ಪಡೆದಿದೆ. ರಾಷ್ಟ್ರದ ಚಿಂತನೆ ಇಲ್ಲದೆ ಆಡಳಿತ ಮಾಡಬೇಕೆಂಬ ಕಲ್ಪನೆಯನ್ನು ಕಾಂಗ್ರೆಸ್ ಇಟ್ಟುಕೊಂಡಿದೆ. ವ್ಯಕ್ತಿ ಮುಖ್ಯವಾಗಿರದೆ ಸಮಾಜದ ಕೆಲಸವನ್ನು ಒಗ್ಗಟ್ಟಿನಿಂದ ಮಾಡಬೇಕು. ಹಿಂದುತ್ವದ ವಿಚಾರಧಾರೆಯಲ್ಲಿ ಬದುಕು ನಡೆಸಿದರೆ ವಿಶ್ವದಲ್ಲಿ ಶಾಂತಿ ನೆಲೆಸಲು ಸಾಧ್ಯವಾಗುತ್ತದೆ. ಕಾರ್ಯಕರ್ತರ ಬೆಂಬಲ ಇಲ್ಲದೆ ಜಿಲ್ಲೆಯಲ್ಲಿ ಯಾವುದೇ ಕೆಲಸ ಕಾರ್ಯ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ಪಕ್ಷದ ಅಭ್ಯರ್ಥಿ ಬ್ರಿಜೇಷ್ ಚೌಟ ಹೇಳಿದರು. ಪುತ್ತೂರಿನ ಜೈನ ಭವನ ದಲ್ಲಿ ಭಾರತೀಯ ಜನತಾ ಪಾರ್ಟಿಯ ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.


    ತುಳುನಾಡಿನ ದೈವ ದೇವರ ಆಶೀರ್ವಾದಿಂದ ಟಿಕೆಟ್ ಲಭಿಸಿದೆ. ಯಾವುದೇ ಭ್ರಮೆಯಲ್ಲಿ ಇರದೆ, ಹಿಂದುತ್ವದ ವಿಚಾರದಲ್ಲಿ ಸ್ಪಷ್ಟವಾಗಿದ್ದೇವೆ. ದಕ್ಷಿಣ ಕನ್ನಡ ದೇವರು ಪ್ರೀತಿಸುವ ಜಿಲ್ಲೆಯಾಗಿದ್ದು, ಇಲ್ಲಿನ ಜನರು ಸಾಮರ್ಥ್ಯವಂತರಾಗಿದ್ದಾರೆ. ಮುಂದಿನ 25ವರ್ಷ ಭಾರತದ ಅಮೃತ ಕಾಲವಾಗಿದ್ದು, ಜನರಿಗೆ ಸಾಧನೆಗಳಿಗೆ ವೇದಿಕೆ ನೀಡುವ ಕಾರ್ಯ ಮಾಡಲಾಗುವುದು. ಕಾರ್ಯಕರ್ತರನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಲಾಗುವುದು. ಕಾರ್ಯಕರ್ತರ ಚುನಾವಣೆಯಾಗಿದ್ದು, ಮೋದಿಗೆ ಶಕ್ತಿ ತುಂಬುವ ಕಾರ್ಯವಾಗಬೇಕು. ಕನಸಿನ ದಕ್ಷಿಣ ಕನ್ನಡ ನಿರ್ಮಾಣವನ್ನು ಮಾಡುವ ನಿಟ್ಟಿನಲ್ಲಿ ಎಲ್ಲರ ಸಹಕಾರಬೇಕು ಎಂದರು


    ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಾತನಾಡಿ ಸಾಮಾಜಿಕ ಜವಾಬ್ದಾರಿಯನ್ನು ಅರಿತು ಚುನಾವಣೆಯ ಕೆಲಸ ಕಾರ್ಯದಲ್ಲಿ ತೊಡಗಿಕೊಳ್ಳಬೇಕು. ಸಮರ್ಥ ಅಭ್ಯರ್ಥಿಯನ್ನು ಕ್ಷೇತ್ರಕ್ಕೆ ನೀಡಿದ್ದು, 4ಲಕ್ಷ ಮತದ ಅಂತರದಲ್ಲಿ ಗೆಲ್ಲಿಸಿಕೊಡಬೇಕಾಗಿದೆ. ಹತ್ತು ವರ್ಷದಿಂದ ಪಕ್ಷದ ಯೋಚನೆಗಳೊಂದಿಗೆ ದೇಶವನ್ನು ಮುನ್ನಡೆಸುವ ಕಾರ್ಯವನ್ನು ನರೇಂದ್ರ ಮೋದಿಯವರು ಮಾಡಿದ್ದಾರೆ. ಮುಂದೆಯೂ ಮೋದಿಯವರು ಹಿಂದುತ್ವದ ನೆಲೆಗಟ್ಟಿನಲ್ಲಿ ದೇಶವನ್ನು ಮುನ್ನಡೆಸುವಂತಾಗಬೇಕು. ದಿನದ ಮೂರು ಗಂಟೆ ಪಕ್ಷದ ಕೆಲಸಕ್ಕಾಗಿ ಇಡುವ ಮೂಲಕ ಕೇಂದ್ರ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯವಾಗಬೇಕು. ಮುಂದಿನ ವಿಧಾನ ಸಭಾ ಕ್ಷೇತ್ರ ಬಿಜೆಪಿಯದ್ದು ಎಂಬ ರೀತಿಯಲ್ಲಿ ತೊಡಗಿಕೊಳ್ಳಬೇಕು ಎಂದು ತಿಳಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply