Connect with us

    LATEST NEWS

    ಮುಲ್ಕಿ ಬಂಟರ ಭವನದಲ್ಲಿ ‘ಲೋಕಾಯುಕ್ತ ಜನ ಸಂಪರ್ಕ ಸಭೆ’, ದೂರುಗಳಿದ್ದರೆ ಸಲ್ಲಿಸಿ

    ಮಂಗಳೂರು :  ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಈ ಕೆಳಗೆ ನಮೂದಿಸಿದ ದಿನದಂದು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಲಾಗಿದೆ.

    ದಿನಾಂಕ: 09-10-2024 ರಂದು ಬೆಳಿಗ್ಗೆ 11-00 ಗಂಟೆಯಿಂದ ಮುಲ್ಕಿ ತಾಲೂಕಿನ ಮುಲ್ಕಿ ನಗರ ಪಂಚಾಯತ್ ಹತ್ತಿರದ ಬಂಟರ ಭವನದಲ್ಲಿ “ಲೋಕಾಯುಕ್ತ ಜನ ಸಂಪರ್ಕ ಸಭೆ” ಯನ್ನು ಆಯೋಜಿಸಲಾಗಿರುತ್ತದೆ.*

    ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಕೋರಲಾಗಿದೆ.

    ಅರ್ಜಿದಾರರು ನಮೂನೆ 1 & II ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಛೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸುವುದು.

    Share Information
    Advertisement
    Click to comment

    Leave a Reply

    Your email address will not be published. Required fields are marked *