LATEST NEWS
ಮೆಸ್ಕಾಂ ಇಂಜಿನಿಯರ್ ಶಾಂತಕುಮಾರ್ ಮಂಗಳೂರು ಮನೆ ಮೇಲೆ ಲೋಕಾಯುಕ್ತ ದಾಳಿ
ಮಂಗಳೂರು : ರಾಜ್ಯದ 40 ಕಡೆ ಭ್ರಷ್ಟ ಅಧಿಕಾರಿಗಳ ಮನೆ ಕಚೇರಿ ಮೇಲೆ ಬೆಳ್ಳಂಬೆಳಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಅಧಿಕಾರಿಗಳ ನಿದ್ದೆ ಕೆಡಿಸಿದ್ದಾರೆ.
ಮಂಗಳೂರಿನಲ್ಲಿ ಮೆಸ್ಕಾಂ ಇಂಜಿನಿಯರ್ ಶಾಂತಕುಮಾರ್ ಅವರ ಮನೆ ಹಾಗೂ ಕಚೇರಿ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಳೆದ ಐದಾರು ವರ್ಷಗಳಿಂದ ಅತ್ತಾವರ ವಿಭಾಗದ ಮೆಸ್ಕಾಂ ಇಇ ಆಗಿ ಕಾರ್ಯನಿರ್ವಹಿಸುತ್ತಿರುವ ಶಾಂತಕುಮಾರ್ ಅವರ ಬೆಂಗಳೂರಿನ ನಿವಾಸದ ಮೇಲೂ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.