Connect with us

LATEST NEWS

ಜೂನ್ 16ಕ್ಕೆ ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

ಮಂಗಳೂರು, ಜೂನ್ 9: ಲೋಕಾಯುಕ್ತ ಜನ ಸಂಪರ್ಕ ಸಭೆ ಜೂನ್ 16 ರಂದು ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಆಯೋಜಿಸಲಾಗಿದೆ. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಜೂನ್ 16 ರಂದು ರಂದು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದು.


ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕ ಸಂಪರ್ಕಿಸಬಹುದು.
ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು:- ಪೊಲೀಸ್ ಅಧೀಕ್ಷಕರ ಕಛೇರಿ – 0824–2950997, 9364062517, ಪೊಲೀಸ್ ಉಪಾಧೀಕ್ಷಕರು-1 ಕಛೇರಿ, ಪೊಲೀಸ್ ಉಪಾಧೀಕ್ಷಕರು-1 ಕಛೇರಿ 0824–2453420, 9364062579, ಪೊಲೀಸ್ ಉಪಾಧೀಕ್ಷಕರು-2 ಕಛೇರಿ 0824–2453420, 9364062580, ಪೊಲೀಸ್ ನಿರೀೀಕ್ಷಕರು-1 ಕಛೇರಿ 0824–2427237, 9364062691, ಪೋಲೀಸ್ ನಿರೀೀಕ್ಷಕರು-2 ಕಛೇರಿ 0824 – 2427237 ,9364062693.

ಅರ್ಜಿದಾರರು ನಮೂನೆ I & II ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಕಛೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬೇಕು ಎಂದು ಕರ್ನಾಟಕ ಲೋಕಾಯುಕ್ತ ಪೆೊಲೀಸ್ ಅಧೀಕ್ಷಕ ಕುಮಾರಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *