Connect with us

    LATEST NEWS

    ಮಂಗಳೂರು – ಭ್ರಷ್ಟ ಅರಣ್ಯಾಧಿಕಾರಿಗೆ ಕೋಟಿ ರೂ ದಂಡ ಸಹಿತ ಜೈಲು ಶಿಕ್ಷೆ

    ಮಂಗಳೂರು ಜನವರಿ 28: ಲಂಚ ಪಡೆದು ಆದಾಯ ಮೀರಿ ಕೋಟಿ ಕೋಟಿ ಆಸ್ತಿ ಗಳಿಕೆ ಮಾಡಿದ್ದ ಭ್ರಷ್ಟ ಅರಣ್ಯಾಧಿಕಾರಿಗೆ ಕೋಟಿ ರೂ. ದಂಡ ಸಹಿತ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ (ವಿಶೇಷ) ನ್ಯಾಯಾಲಯ ತೀರ್ಪು ನೀಡಿದೆ. ಬೆಳ್ತಂಗಡಿಯ ವಲಯ ಅರಣ್ಯಾಧಿಕಾರಿಯಾಗಿದ್ದ ಎಸ್.ರಾಘವ ಪಾಟಾಳಿ ಪ್ರಕರಣದ ಆರೋಪಿ. ಈತನಿಗೆ 5 ವರ್ಷಗಳ ಸಾದಾ ಸಜೆ ಹಾಗೂ 1 ಕೋಟಿ ಐವತ್ತು ಲಕ್ಷ ರೂಪಾಯಿ ದಂಡ ವಿಧಿಸಿದೆ‌.


    ಅಲ್ಲದೇ ದಂಡ ಕಟ್ಟಲು ವಿಫಲನಾದಲ್ಲಿ ಮತ್ತೆ 01 ವರ್ಷಗಳ ಕಾಲ ಸಾದಾ ಸಜೆ ಶಿಕ್ಷೆ ನೀಡಲಾಗಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿಯನ್ನು ಹೊಂದಿದ ಹಿನ್ನೆಲೆ 2011ರಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು. 13(1)(ಇ) ಜೊತೆಗೆ 13(2) ಭ್ರಷ್ಟಾಚಾರ ತಡೆ ಕಾಯ್ದೆ 1988, ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು 295 ಪುಟಗಳ ಸುಧೀರ್ಘ ಅಂತಿಮ ತೀರ್ಪು ಪ್ರಕಟಿಸಿದ ನ್ಯಾಯಾಧೀಶರು ದಂಡದ ಜೊತೆಗೆ ಶಿಕ್ಷೆ ವಿಧಿಸಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply