MANGALORE
ಜುಲೈ 10 ರಂದು ಮಂಗಳೂರು ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ
ಮಂಗಳೂರು ಜುಲೈ 04: ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಈ ಕೆಳಗೆ ನಮೂದಿಸಿದ ದಿನದಂದು ಭೇಟಿ ನೀಡಿ. ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು.
ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಲಾಗಿದೆ. ದಿನಾಂಕ: 10-07-2024 ರಂದು ಬೆಳಿಗ್ಗೆ 11-00 ಗಂಟೆಯಿಂದ ಮಂಗಳೂರು ತಾಲೂಕು ಕಛೇರಿ, ಮಂಗಳೂರು ಇಲ್ಲಿ “ಲೋಕಾಯುಕ್ತ ಜನ ಸಂಪರ್ಕ ಸಭೆ” ಯನ್ನು ಆಯೋಜಿಸಲಾಗಿರುತ್ತದೆ.
ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ದೂರವಾಣಿ ಅಥವಾ ಮೂಲಕವೂ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಕೋರಲಾಗಿದೆ. ಅರ್ಜಿದಾರರು ನಮೂನೆ 1 & 11 ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಛೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬಹುದಾಗಿದೆ.