LATEST NEWS
ಮೂಡಾ ಕಚೇರಿಗೆ ಲೋಕಾಯುಕ್ತ ಪೊಲೀಸ್ ದಾಳಿ – ಪರಿಶೀಲನೆ
ಮಂಗಳೂರು ಮಾರ್ಚ್ 16 : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ)ದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಸಾರ್ವಜನಿಕರ ಕಡತಗಳು ವಿಲೇವಾರಿ ಆಗುತ್ತಿಲ್ಲ ಮತ್ತು ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು 18 ತಾಸು ಕಚೇರಿಯಲ್ಲಿ ಪರಿಶೀಲನೆ ನಡೆಸಿದರು.
ಬುಧವಾರ ಸಂಜೆ ದಿಢೀರ್ ಭೇಟಿ ನೀಡಿದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು, ಕಚೇರಿಯಲ್ಲಿ ಪರಿಶೀಲನೆ ನಡೆಸಿದಾಗ, ಅಲ್ಲಿರುವ ಅಧಿಕಾರಿಗಳು, ಕೆಲವು ವ್ಯಕ್ತಿಗಳ ಬಳಿ ದೊಡ್ಡ ಪ್ರಮಾಣದಲ್ಲಿ ಹಣ ಇರುವುದು ಕಂಡುಬಂದಿದೆ. ಹಣದ ಬ್ಯಾಗ್ ಬಗ್ಗೆ ಕೇಳಿದಾಗ ಸರಿಯಾದ ಉತ್ತರ ಸಿಕ್ಕಿಲ್ಲ. ಸಾರ್ವಜನಿಕರು ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಅಧಿಕಾರಿಗಳು ನೀಡುವ ಕಿರುಕುಳದ ಕುರಿತು ಹೇಳಿಕೊಂಡಿದ್ದಾರೆ. ದೀರ್ಘಕಾಲದಿಂದ ವಿಲೇವಾರಿ ಆಗದ ಹಲವಾರು ಕಡತಗಳು ಸಿಕ್ಕಿವೆ. ಅಧಿಕಾರಿಗಳು ದಲ್ಲಾಳಿಗಳೊಡನೆ ದೂರವಾಣಿ ಮೂಲಕ ಹೊಂದಾಣಿಕೆ ಮಾಡಿಕೊಂಡು ಕಡತ ವಿಲೇವಾರಿ ಮಾಡುತ್ತಿರುವುದಕ್ಕೆ ಸಾಕ್ಷ್ಯಗಳು ದೊರೆತಿವೆ. ತನಿಖೆ ಮುಂದುವರಿದಿದೆ ಎಂದು ಲೋಕಾಯುಕ್ತ ಎಸ್‌ಪಿ ಕಚೇರಿಯ ಪ್ರಕಟಣೆ ತಿಳಿಸಿದೆ.