LATEST NEWS
ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ವೆನ್ಲಾಕ್ ಮತ್ತು ಲೆಡಿಗೋಷನ್ ಆಸ್ಪತ್ರೆಗೆ ದಿಢೀರ್ ಭೇಟಿ
ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ವೆನ್ಲಾಕ್ ಮತ್ತು ಲೆಡಿಗೋಷನ್ ಆಸ್ಪತ್ರೆಗೆ ದಿಢೀರ್ ಭೇಟಿ
ಮಂಗಳೂರು ಜೂನ್ 22: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಮಂಗಳೂರಿನ ವೆನ್ಲಾಕ್ ಹಾಗೂ ಲೇಡಿಗೋಷನ್ ಸರ್ಕಾರಿ ಆಸ್ಪತ್ರೆಗೆ ಏಕಾಏಕಿ ಭೇಟಿ ನೀಡಿದ ಲೋಕಾಯುಕ್ತ ನ್ಯಾಯಮೂರ್ತಿ ಕುಂದುಕೊರತೆಯ ಪರಿಶೀಲನೆ ನಡೆಸಿದರು.
ವಿಶ್ವನಾಥ್ ಶೆಟ್ಟಿ ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ವೈದ್ಯಕೀಯ ತಪಾಸಣೆಗೆ ಬಂದಿದ್ದ ಶಾಲಾ ವಿದ್ಯಾರ್ಥಿಗಳನ್ನು ಕಂಡು ಅವರಲ್ಲಿ ವಿಚಾರಿಸಿದರು. ತಾವು ಸರಕಾರಿ ಹಾಸ್ಟೆಲ್ ವಿದ್ಯಾರ್ಥಿಗಳಾಗಿದ್ದು ಆರೋಗ್ಯ ತಪಾಸಣೆಗೆ ಆಗಮಿಸಿರುವುದಾಗಿ ತಿಳಿಸಿದ್ದಾರೆ. ಆದರೆ ಅವರ ಜೊತೆ ಯಾರು ವಾರ್ಡನ್ ಇರಲಿಲ್ಲ. ಅದನ್ನು ಗಮನಿಸಿದ ವಿಶ್ವನಾಥ್ ಶೆಟ್ಟಿ ಅಧಿಕಾರಿಗಳ ವಿರುದ್ದ ಅಸಮಾದಾನ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಹಾಗೂ ಹಾಸ್ಟೆಲ್ ವಾರ್ಡನ್‍ಗೆ ನೋಟಿಸ್ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಂತರ ನಗರದ ಲೇಡಿಗೋಷನ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶಿಲನೆ ನಡೆಸಿದರು. ನೂತನ ಸುಸಜ್ಜಿತ ಕಟ್ಟಡ ನಿರ್ಮಾಣವಾಗಿದ್ದರೂ ಹಳೇ ಕಟ್ಟಡದಲ್ಲೇ ರೋಗಿಗಳನ್ನು ಉಪಚರಿಸುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದ ಅವರು ನೂತನ ಆಸ್ಪತ್ರೆಯ ಕಟ್ಟಡಕ್ಕೆ ಬೇಕಾಗಿರುವ ಮೂಲ ಸೌಕರ್ಯ ಮತ್ತು ಸಿಬ್ಬಂದಿಗಳನ್ನು ಈ ಕೂಡಲೇ ಒದಗಿಸುವಂತೆ ರಾಜ್ಯ ಸರಕಾರಕ್ಕೆ ಬರೆಯುವುದಅಗಿ ಅವರು ತಿಳಿಸಿದರು.