LATEST NEWS
ಶಿಕ್ಷಣ ಸಂಸ್ಥೆಯಲ್ಲೂ ಲಂಚಾವತಾರ – ಲೋಕಾಯುಕ್ತ ಬಲೆಗೆ ಬಿದ್ದ ಅನುದಾನಿತ ಶಾಲಾ ಸಂಚಾಲಕಿ
ಮಂಗಳೂರು ಜುಲೈ 08 : ಸರಕಾರಿ ಕಚೇರಿಗಳಲ್ಲಿ ನಡೆಯುತ್ತಿದ್ದ ಲಂಚಾವತಾರ ಇದೀಗ ಶಿಕ್ಷಣ ಸಂಸ್ಥೆಗಳಿಗೂ ಹಬ್ಬಿದ್ದು, ಈ ತಿಂಗಳ ಅಂತ್ಯಕ್ಕೆ ನಿವೃತ್ತಿಯಾಗಲಿರುವ ಮುಖ್ಯ ಶಿಕ್ಷಕಿಯ ದಾಖಲೆಗಳಿಗೆ ಸಹಿ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟು, ಶುಕ್ರವಾರ ₹ 5 ಲಕ್ಷ ಸ್ವೀಕರಿಸುತ್ತಿದ್ದ ವೇಳೆ ಅನುದಾನಿತ ಶಾಲಾ ಸಂಚಾಲಕಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಹೊರವಲಯದ ಬಜಪೆಯ ನಿರಂಜನ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕಿ ಜ್ಯೋತಿ ಪೂಜಾರಿ ಲೋಕಾಯಕ್ತ ಬಲೆಗೆ ಬಿದ್ದ ಆರೋಪಿ.
ಅದೇ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿದ್ದ ಶೋಭಾರಾಣಿ ಅವರ ನಿವೃತ್ತಿ ಹಾಗೂ ಉಪದಾನ ದಾಖಲೆಗಳಿಗೆ ಶಾಲಾ ಸಂಚಾಲಕರು ಸಹಿ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ನೀಡಬೇಕಾಗಿತ್ತು. ಈ ದಾಖಲೆಗೆ ಸಹಿ ಹಾಕಿ ಹಾಕಲು ಜ್ಯೋತಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ದೂರು ನೀಡಲಾಗಿತ್ತು.
You must be logged in to post a comment Login