LATEST NEWS
ಮನೆಗೆ ವಿದ್ಯುತ್ ಸಂಪರ್ಕ ಕೊಡಲು 20 ಸಾವಿರ ಲಂಚಕ್ಕೆ ಕೈ ಒಡ್ಡಿದ ಮೆಸ್ಕಾಂ ಸಹಾಯಕ ಎಂಜಿನಿಯರ್ ಲೋಕಾಯಕ್ತ ಬಲೆಗೆ

ಉಡುಪಿ ಜೂನ್ 06: ವ್ಯಕ್ತಿಯೊಬ್ಬರ ಮನೆಗೆ ವಿದ್ಯುತ್ ಸಂಪರ್ಕ ಕೊಡಲು 2 ತಿಂಗಳು ಸತಾಯಿಸಿದಲ್ಲದೆ 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬ್ರಹ್ಮಾವರದ ಮೆಸ್ಕಾಂ ಸಹಾಯಕ ಎಂಜಿನಿಯರ್ (ಎ.ಇ) ತಮ್ಮ ಕಚೇರಿಯಲ್ಲಿ ₹20 ಸಾವಿರ ಲಂಚದ ಹಣ ಪಡೆಯುತ್ತಿದ್ದಾಗ ಶುಕ್ರವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಅಶೋಕ್ ಪೂಜಾರಿ (46) ಬಂಧಿತ ಆರೋಪಿ. ದಿನೇಶ್ ಪೂಜಾರಿ ಎಂಬುವವರ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಇವರು ₹20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ದಿನೇಶ್ ಅವರು ಈ ವಿಚಾರವನ್ನು ಲೋಕಾಯುಕ್ತ ಪೊಲೀಸರ ಗಮನಕ್ಕೆ ತಂದಿದ್ದರು. ಲಂಚದ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಪೋಲಿಸರು ದಾಳಿ ನಡೆಸಿ, ನಗದು ಸಹಿತ ಆರೋಪಿಯನ್ನು ಬಂಧಿಸಿದ್ದಾರೆ. ಲೋಕಾಯುಕ್ತ ಎಸ್‌ಪಿ ಕುಮಾರ್‌ಚಂದ್ರ ಅವರ ನೇತೃತ್ವದಲ್ಲಿ, ಡಿವೈಎಸ್ಪಿ ಮಂಜುನಾಥ್, ಭಾರತಿ, ರಾಜೇಂದ್ರ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

2 Comments