LATEST NEWS
ಲೋಕಾಯುಕ್ತ ಬಲೆಗೆ ಬಿದ್ದಿದ್ದ ಮುಲ್ಕಿಯ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್ ಜಾಮೀನು ಅರ್ಜಿ ವಜಾ
ಮಂಗಳೂರು ಜನವರಿ 08: ನಾಲ್ಕು ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಮುಲ್ಕಿಯ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್ ಜಾಮೀನು ಅರ್ಜಿ ವಜಾ ಆಗಿದ್ದು. ಸದ್ಯ ಜೈಲೆ ಗತಿ.
ಡಿಸೆಂಬರ್ 19 ರಂದು ವ್ಯಕ್ತಿಯೊಬ್ಬರಿಂದ 4 ಲಕ್ಷ ಸ್ವೀಕರಿಸುವಾಗಿ ಲೋಕಾಯುಕ್ತ ಪೊಲೀಸರು ಮುಲ್ಕಿಯ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್ ಅವರನ್ನು ಅರೆಸ್ಟ್ ಮಾಡಿದ್ದರು, ಬಳಿಕ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 08/2024 ಕಲಂ 7(ಎ), 12 ಭ್ರಷ್ಟಾಚಾರ ನಿರ್ಬಂಧಕ ಕಾಯ್ದೆ, 1988 (ತಿದ್ದುಪಡಿ ಕಾಯ್ದೆ, 2018) ರಡಿ ಪ್ರಕರಣ ದಾಖಲಾಗಿತ್ತು, ಬಳಿಕ ಆರೋಪಿಯನ್ನು ಮಾನ್ಯ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ, ಮಂಗಳೂರು ಇಲ್ಲಿಗೆ ಹಾಜರುಪಡಿಸಿದ್ದು, ಘನ ನ್ಯಾಯಾಲಯವು ದಿನಾಂಕ 08.01.2025 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು.
ಬಳಿಕ ಆರೋಪಿ ಮುಲ್ಕಿಯ ಕಂದಾಯ ನಿರೀಕ್ಷಕರಾದ ಜಿ.ಎಸ್ ದಿನೇಶ್ ರವರು ಘನ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಈ ದಿನ ದಿನಾಂಕ 08.01.2025 ರಂದು ಮಾನ್ಯ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ, ಮಂಗಳೂರು ಇಲ್ಲಿನ ನ್ಯಾಯಾಧೀಶರಾದ ಶ್ರೀಮತಿ ಸಂಧ್ಯಾ ಎಸ್ ರವರು ವಿಚಾರಣೆ ನಡೆಸಿ, ಆರೋಪಿತರು ಜಾಮೀನು ಕೋರಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿರುತ್ತಾರೆ. ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಶ್ರೀ ರವೀಂದ್ರ ಮುನ್ನಿಪ್ಪಾಡಿ ರವರು ವಾದಿಸಿರುತ್ತಾರೆ. ಆರೋಪಿತ ಅಧಿಕಾರಿಗೆ ನ್ಯಾಯಾಂಗ ಬಂಧನ ಮುಂದುವರಿದಿದೆ ಎಂಬುದಾಗಿ ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರಾದ ನಟರಾಜ ಎಂ.ಎ ರವರು ತಿಳಿಸಿರುತ್ತಾರೆ.
ಒಂದು ವರ್ಷಕ್ಕಿಂತ ಹೆಚ್ಚು ಕಾಲ ವಿಲೇವಾರಿಯಾಗದ ಕಡತವು ಲೋಕಾಯುಕ್ತ ಟ್ರ್ಯಾಪ್ ಕೇಸ್ ನಂತರ ಕೇವಲ 210 ರೂಪಾಯಿ ಸರ್ಕಾರ ನಿಗದಿಪಡಿಸಿದ ಶುಲ್ಕವನ್ನು ಪಡೆದು ಪಹಣಿಯಲ್ಲಿ ವಾರಸುದಾರರುಗಳ ಹೆಸರುಗಳ ಸೇರ್ಪಡೆಯಾಗಿರುತ್ತದೆ ಎಂಬುದಾಗಿ ಪಿರ್ಯಾದಿದಾರರು ಮಂಗಳೂರು ಲೋಕಾಯುಕ್ತ ಕಚೇರಿಗೆ ತಿಳಿಸಿ ಅಧಿಕಾರಿ/ಸಿಬ್ಬಂದಿಯವರಿಗೆ ಅಭಿನಂದನೆ ಸಲ್ಲಿಸಿರುತ್ತಾರೆ.
1 Comment