ಲೋಕಾಯುಕ್ತ ಅಧಿಕಾರಿಗಳಿಂದ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲೆ ಪತ್ರ ಪರಿಶೀಲನೆ
ಪುತ್ತೂರು ಡಿಸೆಂಬರ್ 4: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಹಾಗೂ ಆಡಳಿತಾಧಿಕಾರಿಗಳ ನಡುವೆ ಹೊಂದಾಣಿಕೆ ಸಮಸ್ಯೆ ಹಾಗೂ ಆಡಳಿತಾತ್ಮಕ ಸಮಸ್ಯೆ ದೂರಿನ ಹಿನ್ನಲೆಯಲ್ಲಿ ಲೋಕಾಯುಕ್ತ ಎಸ್.ಪಿ.ಕೆ.ಎನ್.ಮಾದಯ್ಯ ತಂಡ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಲೋಕಾಯುಕ್ತ ವಿಶ್ವನಾಥ್ ಶೆಟ್ಟಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರ ದೂರಿನ ಹಿನ್ನಲೆಯಲ್ಲಿ ಲೋಕಾಯುಕ್ತ ತಂಡ ಭೇಟಿ ನೀಡಿ ಆಸ್ಪತ್ರೆಗೆ ಸೇರಿದ ದಾಖಲೆ ಪತ್ರಗಳನ್ನು ಪರಿಶೀಲಿಸಿದರು.
ಕಳೆದ ಕೆಲವು ತಿಂಗಳಿನಿಂದ ಆಸ್ಪತ್ರೆಯಲ್ಲಿರುವ ವೈದ್ಯರಿಗೆ ಹಾಗೂ ಆಡಳಿತ ಕಛೇರಿಯ ನಡುವೆ ಹಲವು ವಿಚಾರಗಳಲ್ಲಿ ಭಿನ್ನಾಭಿಪ್ರಾಯ ತಲೆದೋರಿದ್ದು, ಇದರ ಪರಿಣಾಮ ಆಸ್ಪತ್ರೆಗೆ ಬರುವ ಸಾರ್ವಜನಿಕರ ಮೇಲೂ ಬಿದ್ದ ಹಿನ್ನಲೆಯಲ್ಲಿ ದೂರು ನೀಡಲಾಗಿತ್ತು.