Connect with us

LATEST NEWS

ಶತಮಾನದ ದೀರ್ಘಾವಧಿ ಚಂದ್ರಗ್ರಹಣ ಮತ್ತು ಭೂಮಿಯ ಸಮೀಪ ಮಂಗಳ

ಶತಮಾನದ ದೀರ್ಘಾವಧಿ ಚಂದ್ರಗ್ರಹಣ ಮತ್ತು ಭೂಮಿಯ ಸಮೀಪ ಮಂಗಳ

ಮಂಗಳೂರು ಜುಲೈ 26 : ಈ ಶತಮಾನದ ದೀರ್ಘಾವಧಿ ಚಂದ್ರಗ್ರಹಣವು ಜುಲೈ 27 ರಾತ್ರಿ ಮತ್ತು 28ರಂದು ಮುಂಜಾನೆ ಸಂಭವಿಸಲಿದೆ. ಜುಲೈ 27ರ ರಾತ್ರಿ 11.54ಕ್ಕೆ ಚಂದ್ರಗ್ರಹಣವು ಆರಂಭವಾಗಲ್ಲಿದ್ದು ಮಧ್ಯರಾತ್ರಿ 1 ಗಂಟೆಯಿಂದ 2.43ರವರೆಗೆ ಸಂಪೂರ್ಣ ಗ್ರಹಣ ಗೋಚರಿಸಲಿದೆ. ಜುಲೈ 28 ಮುಂಜಾನೆ 3.49ಕ್ಕೆ ಗ್ರಹಣವು ಬಿಡಲಿದ್ದು ಈ ವಿದ್ಯಮಾನವನ್ನು ಬರಿಗಣ್ಣಿನಿಂದ ನೋಡಬಹುದು. ಭೂಮಿಯ ವಾತಾವರಣದಲ್ಲಿ ಹಾದುಹೋಗುವ ಸೂರ್ಯನ ಕಿರಣಗಳ ಚದುರುವಿಕೆಯಿಂದ ಚಂದ್ರನು ರಕ್ತವರ್ಣದಲ್ಲಿ ಕಂಡುಬರುತ್ತಾನೆ.

ಇದರೊಂದಿಗೆ ಕಳೆದ 15 ವರ್ಷದ ಅವಧಿಯಲ್ಲೇ ಭೂಮಿಗೆ ಮಂಗಳ ಗ್ರಹ ಹತ್ತಿರದಲ್ಲಿದ್ದು , ಜುಲೈ 27ರಂದು ಸೂರ್ಯ , ಭೂಮಿ ಮತ್ತು ಮಂಗಳ ಒಂದೇ ಸಾಲಿನಲ್ಲಿ ಬರಲಿವೆ. ಭೂಮಿ ಹಾಗು ಮಂಗಳ ಗ್ರಹಗಳ ನಡುವಿನ ಅಂತರ ಜುಲೈ 31ನೇ ತಾರೀಖಿನಂದು ಕಡಿಮೆ ಇರಲಿದ್ದು ಆ ದಿನ ಮಂಗಳ ಗ್ರಹ ಪ್ರಕಾಶಮಾನವಾಗಿರುತ್ತದೆ.

ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರಲ್ಲಿ ರಾತ್ತಿ 11.30 ರಿಂದ 3.30ರ ವರೆಗೆ ಈ ಖಗೋಳ ವಿದ್ಯಮಾನವನ್ನು ವೀಕ್ಷಿಸಲು ದೂರದರ್ಶಕ ಮತ್ತು ದುರ್ಬೀನುಗಳ ವ್ಯವಸ್ಥೆ ಮಾಡಲಾಗಿದೆ. ಮೋಡಗಳ ಅಡಚಣೆ ಇಲ್ಲದಿದ್ದಲ್ಲಿ ಆಸಕ್ತ ವೀಕ್ಷಕರು ಇದರ ಸದುಪಯೋಗ ಪಡೆಯಬಹುದಾಗಿದೆ. ನಿರ್ದೇಶಕ ಡಾ ಕೆ ವಿ ರಾವ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

Share Information
Continue Reading
Advertisement
Click to comment

Leave a Reply

Your email address will not be published. Required fields are marked *