Connect with us

    FILM

    ತಲೆಮರೆಸಿಕೊಂಡಿರುವ ನಟಿ ಅಭಿನಯಾಗೆ ಲುಕ್ ಔಟ್ ಜಾರಿ ಮಾಡಿದ ಪೊಲೀಸರು

    ಬೆಂಗಳೂರು ಫೆಬ್ರವರಿ 09: ವರದಕ್ಷಿಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆಗೆ ಗುರಿಯಾಗಿ ನಾಪತ್ತೆಯಾಗಿರುವ ನಟಿ ಅಭಿನಯಾ ಅವರ ಪತ್ತೆಗೆ ಬೆಂಗಳೂರು ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.


    ನಟಿ ಅಭಿನಯಾ ಅತ್ತಿಗೆಗೆ ವರದಕ್ಷಿಣಿ ಕಿರುಕುಳ ನೀಡಿದ ಪ್ರಕರಣದಲ್ಲಿ ಇತ್ತೀಚೆಗೆ ಜೈಲು ಶಿಕ್ಷೆ ಪ್ರಕಟ ಆಗಿತ್ತು. ಆ ಬಳಿಕ ಅವರು ತಲೆ ಮರೆಸಿಕೊಂಡಿದ್ದಾರೆ. ಅಭಿನಯಾ ಅವರ ಪತ್ತೆಗಾಗಿ ಬೆಂಗಳೂರಿನ ಚಂದ್ರಾ ಲೇಔಟ್​ ಪೊಲೀಸರು ಬಲೆ ಬೀಸಿದ್ದಾರೆ. ಅಭಿನಯಾ ಜೊತೆ ಅವರ ತಾಯಿ ಜಯಮ್ಮ ಹಾಗೂ ಸಹೋದರ ಚೆಲುವರಾಜು ಅವರಿಗಾಗಿಯೂ ಹುಡುಕಾಟ ನಡೆದಿದೆ. ಅಪರಾಧಿಗಳ ಬಗ್ಗೆ ಸುಳಿವು ಸಿಕ್ಕರೆ ಕೂಡಲೇ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಪೊಲೀಸರು ಮನವಿ ಮಾಡಿದ್ದು, ಲುಕ್​ಔಟ್​ ನೋಟಿಸ್​ (lookout notice) ಜಾರಿ ಮಾಡಿದ್ದಾರೆ. ಪೊಲೀಸರು ಈ ಮೂವರನ್ನೂ ಬಂಧಿಸಿ ಕೋರ್ಟ್​ಗೆ ಹಾಜರು ಪಡಿಸಬೇಕಿತ್ತು. ಆದರೆ ಅಷ್ಟರಲ್ಲಾಗಲೇ ಅವರು ತಲೆಮರೆಸಿಕೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply