LATEST NEWS
ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಗೆ ಲಾರಿ ಡಿಕ್ಕಿ…!!

ಮಂಗಳೂರು ಅಕ್ಟೋಬರ್ 26: ಮುಂಜಾನೆ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಗೆ ಲಾರಿ ಡಿಕ್ಕಿಹೊಡೆದು ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಅಶೋಕನಗರದ ನಿವಾಸಿ ಎಂದು ಹೇಳಲಾಗಿದ್ದು, ಸುಮಾರ 40-45 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ತನ್ನ ಆ್ಯಕ್ಟಿವಾ ದ್ವಿಚಕ್ರ ವಾಹನವನ್ನು ಕೊಟ್ಟಾರ ಚೌಕಿಯಲ್ಲಿ ರಸ್ತೆ ಪಕ್ಕ ನಿಲ್ಲಿಸಿ ವಾಕಿಂಗ್ ನಿರತರಾಗಿದ್ದ ವೇಳೆ ಹರ್ಯಾಣದ ನೋಂದಣಿ ಹೊಂದಿದ ಲಾರಿ ಢಿಕ್ಕಿ ಹೊಡೆಯಿತು ಎಂದು ತಿಳಿದುಬಂದಿದೆ. ಇದರಿಂದ ಪಾದಚಾರಿ ವ್ಯಕ್ತಿಯು ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಪರೀಕ್ಷಿಸಿದ ವೈದ್ಯರು ಗಾಯಾಳು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಸಂಚಾರ ಉತ್ತರ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
