Connect with us

LATEST NEWS

ಪಡೀಲ್ ಬಳಿ ಡಾಮರು ಸಾಗಾಟದ ಲಾರಿ ಪಲ್ಟಿ

ಮಂಗಳೂರು, ಫೆಬ್ರವರಿ 09: ಡಾಮರು ಮಿಕ್ಸ್ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ಇಂದು ಮುಂಜಾನೆ ನಗರ ಹೊರವಲಯದ ಪಡೀಲ್ ಬಳಿ ನಡೆದಿದೆ.‌

ಘಟನೆಯಲ್ಲಿ ಲಾರಿ ಚಾಲಕ ಗಂಭೀರ ಗಾಯಗೊಂಡು ಲಾರಿಯಲ್ಲಿ ಸಿಲುಕಿಕೊಂಡಿದ್ದರು. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಚಾಲಕನನ್ನು ಹೊರತೆಗೆದು ಆಸ್ಪತ್ರೆಗೆ ‌ದಾಖಲಿಸಿದ್ದಾರೆ.

ಸ್ಥಳಕ್ಕೆ ಸಂಚಾರ ದಕ್ಷಿಣ ಠಾಣೆಯ ಪೊಲೀಸರು ತೆರಳಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Advertisement
Click to comment

You must be logged in to post a comment Login

Leave a Reply