Connect with us

    LATEST NEWS

    ಬ್ರೇಕ್ ಲೈನರ್ ಜಾಮ್ ಆಗಿ ಕಂಟೈನರ್ ಲಾರಿ ಟೈಯರ್ ಗೆ ಬೆಂಕಿ – ತಪ್ಪಿದ ಅನಾಹುತ

    ಮಂಗಳೂರು ಡಿಸೆಂಬರ್ 01: ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಸೇತುವೆ ಬಳಿ ಕಂಟೈನರ್ ಲಾರಿಯೊಂದರ ಬ್ರೇಕ್ ಲೈನರ್ ಜಾಮ್ ಆಗಿ ಟೈಯರ್ ಗೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಸ್ಥಳೀಯರ ಸಹಕಾರದಲ್ಲಿ ಬೆಂಕಿ ನಂದಿಸಲಾಗಿದೆ.


    ಪಡುಬಿದ್ರೆ ನಂದಿಕೂರು ಕೈಗಾರಿಕಾ ಪ್ರದೇಶದ ಬ್ರೈಟ್ ಫ್ಲೆಕ್ಸ್ ಕಂಪನಿಯಿಂದ ಮಂಗಳೂರು ಬಂದರ್ ಕಡೆಗೆ ಪ್ಲಾಸ್ಟಿಕ್ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದ ಕಂಟೈನರ್ ಬಪ್ಪನಾಡು ಸೇತುವೆ ತಲುಪುತ್ತಿದ್ದಂತೆ ಬ್ರೇಕ್ ಲೈನರ್ ಜಾಮ್ ಆಗಿ ಟಯರ್ ಮೇಲ್ಗಡೆ ಹೊತ್ತಿ ಉರಿದಿದೆ. ಬೆಂಕಿ ಧಗ ಧಗನೇ ಹೊತ್ತಿ ಉರಿಯುತ್ತಿದ್ದಂತೆ ಕಂಗಾಲಾದ ಕಂಟೈನರ್ ಚಾಲಕ ಹಿಮಾಚಲ ಪ್ರದೇಶ ನಿವಾಸಿ ರಂಜಿತ್ ಕೆಳಗೆ ಹಾರಿ ಅಪಾಯದಿಂದ ಪಾರಾಗಿದ್ದಾರೆ.

    ಕೂಡಲೇ ಮುಲ್ಕಿ ನ ಪಂ ಸದಸ್ಯ ಬಾಲಚಂದ್ರ ಕಾಮತ್, ಮುಲ್ಕಿ ಪೊಲೀಸ್ ಠಾಣೆಯ ಎಸ್ಐ ಅನಿತ ನೇತೃತ್ವದಲ್ಲಿ ಮುಲ್ಕಿ ಹಾಗೂ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು, ಹೆಜ್ಮಾಡಿ ಟೋಲ್ ಸಿಬ್ಬಂದಿ ಹಾಗೂ ಸ್ಥಳೀಯರು ಪೆಟ್ರೋಲ್ ಬಂಕ್ ಬಳಿಯಿಂದ ಬೆಂಕಿ ನಂದಿಸುವ ಸಾಧನವನ್ನು ತಂದು ಕೂಡಲೇ ಬೆಂಕಿ ನಂದಿಸಿದ್ದಾರೆ. ಬಳಿಕ ಹಳೆಯಂಗಡಿಯ ಪೂಜಾ ರೇಂಜರ್ಸ್ ವತಿಯಿಂದ ನೀರನ್ನು ತಂದು ಪೂರ್ತಿ ಬೆಂಕಿ ನಂದಿಸಲಾಯಿತು.

    Share Information
    Advertisement
    Click to comment

    Leave a Reply

    Your email address will not be published. Required fields are marked *