KARNATAKA
ಲಾರಿ ಡಿಕ್ಕಿ, ರಸ್ತೆ ದಾಟುತ್ತಿದ್ದ ಯುವಕ ಸ್ಥಳದಲ್ಲೇ ಮೃತ್ಯು..!

ಬೆಂಗಳೂರು: ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಸಮೀಪ ಆನೇಕಲ್ ತಾಲೂಕಿನ ಮರಸೂರು ಬಳಿ ನಡೆದಿದೆ.
19 ವರ್ಷದ ಯುವಕ ಆಕಾಶ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಡಿಕ್ಕಿ ಹೊಡೆದ ಬಳಿಕ ಚಾಲಕ ಲಾರಿಯೊಂದಿಗೆ ಎಸ್ಕೇಪ್ ಆಗಿದ್ದಾನೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸೂರ್ಯನಗರ ಠಾಣಾ ಪೊಲೀಸರು ಸಿಸಿ ಟಿವಿಗಳನ್ನು ಪರಿಶೀಲನೆ ಮಾಡಿ ಎಸ್ಕೇಪ್ ಆಗಿರುವ ಲಾರಿ ಚಾಲಕನಿಗೆ ಶೋಧ ಆರಂಭಿಸಿದ್ದಾರೆ. ಗುಲ್ಬರ್ಗ ಮೂಲದ ಆಕಾಶ್ ತಂದೆ ನೋಡಲು ಬಂದಿದ್ದ ಆನೇಕಲ್ ಚಂದಾಪುರ ಮುಖ್ಯ ರಸ್ತೆಯ ಬಾರ್ ಒಂದರಲ್ಲಿ ವಾಚ್ ಮ್ಯಾನ್ ಆಗಿದ್ದ ತಂದೆಯನ್ನು ಮಾತನಾಡಿಸಿಕೊಂಡು ರಸ್ತೆ ದಾಟಲು ಮುಂದಾಗಿದ್ದ ಆಕಾಶ್ ಮೇಲೆ ಲಾರಿ ಹರಿದಿದ್ದು ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
