Connect with us

    BANTWAL

    ಬಂಟ್ವಾಳ – ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸ್ಥಳದಲ್ಲೇ ಸಾವು

    ಬಂಟ್ವಾಳ ಅಗಸ್ಟ್ 12: ಲಾರಿ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬಂಟ್ವಾಳ ತಾಲೂಕಿನ ಬುಡೋಳಿ ಸಮೀಪದ ಬೊಳ್ಳುಕಲ್ಲು ಎಂಬಲ್ಲಿ ನಡೆದಿದೆ.


    ಮೃತಪಟ್ಟವರನ್ನು ಕನ್ಯಾನ ಪರಕಜೆ ನಿವಾಸಿ ಮಂಜು ಬೆಳ್ಚಾಡ ಎಂಬವರ ಪುತ್ರ ಗಣೇಶ್ ಬಂಗೇರ (54) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಕಡೆಗೆ ವೈಯಕ್ತಿಕ ಕೆಲಸದ ನಿಮಿತ್ತ ತನ್ನ ದ್ವಿಚಕ್ರ ವಾಹನದಲ್ಲಿ ಸಂಚರಿಸುವ ವೇಳೆ ಬುಡೋಳಿ ಸಮೀಪ ಮಂಗಳೂರು ಕಡೆಗೆ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಕೂಟರ್ ಲಾರಿಯ ಅಡಿಯಲ್ಲಿ ಸಿಲುಕಿದ್ದು ಗಣೇಶ್ ಬಂಗೇರ ಸ್ಥಳದಲ್ಲೇ ಮೃತಪಟ್ಟಿ ದ್ದಾರೆ ಎಂದು ತಿಳಿದು ಬಂದಿದೆ.

    ಸ್ಥಳಕ್ಕೆ ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಎಚ್‌. ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply