ಮಂಗಳೂರು ಸೆಪ್ಟೆಂಬರ್ 13: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ರಸ್ತೆ ಮಧ್ಯೆಯೇ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರಿನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.

ಅತೀ ವೇಗ ಮತ್ತು ಅಜಾರೂಕತೆಯ ಚಾಲನೆಯಿಂದ ಘಟನೆ ನಡೆದಿದೆ ಎನ್ನಲಾಗಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಹೆದ್ದಾರಿಯಲ್ಲಿ ಸಂಚಾರ ದಟ್ಟನೆಯುಂಟಾಗಿದ್ದು, ಇತರ ವಾಹನಗಳ ಸಂಚಾರಕ್ಕೆ ತೊಡಕುಂಟಾಗಿದೆ ಎಂದು ತಿಳಿದು ಬಂದಿದೆ.



