Connect with us

DAKSHINA KANNADA

ಉಪ್ಪಳ – ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ

ಕಾಸರಗೋಡು ಜುಲೈ 6 : ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 66 ರ ಉಪ್ಪಳ ಪೇಟೆ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಇಂದು ಬೆಳಗ್ಗಿನ ಜಾವ ಸಂಭವಿಸಿದೆ. ಲಾರಿ ಚಾಲಕ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.

ಮಂಗಳೂರು ಕಡೆಯಿಂದ ಕಣ್ಣೂರು ಕಡೆ ತೆರಳುತ್ತಿದ್ದ ಈ ಲಾರಿ ಉಪ್ಪಳ ಪೇಟೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಅಪಘಾತದಿಂದಾಗಿ ಹೆದ್ದಾರಿ ಸಂಚಾರ ಕೆಲಕಾಲ ಸ್ಥಗಿತಗೊಂಡಿತು. ಮಂಜೇಶ್ವರ ಪೊಲೀಸರು ಸಂಚಾರ ಸುಗಮಗೊಳಿಸಿದರು. ಮಳೆಯ ಕಾರಣ ಲಾರಿ ಚಾಲಕನ ನಿಯಂತ್ರಣ ತಪ್ಪಿ ಈ ಅನಹುತಾ ಸಂಭವಿಸಿದೆ ಎನ್ನಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *