Connect with us

    KARNATAKA

    ಸಕಲೇಶಪುರದಲ್ಲಿ ಗುಂಡಿ ತಪ್ಪಿಸಲು ಹೋಗಿ ಕಂದಕ್ಕೆ ಉರುಳಿದ ಲಾರಿ, ಮೂವರಿಗೆ ಗಾಯ..!

    ಸಕಲೇಶಪುರ : ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ರಸ್ತೆಯಲ್ಲಿ ಬುಧವಾರ ತಡರಾತ್ರಿ ಸರಕು ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿದ ಕಂದಕಕ್ಕೆ ಉರುಳಿ ಬಿದ್ದಿದೆ.

    ದುರ್ಘಟನೆಯಲ್ಲಿ ಚಾಲಕ ಸಹಿತ ಮೂವರು ಗಾಯಗೊಂಡಿದ್ದಾರೆ. ಕೆಲ ದಿನಗಳ ಹಿಂದೆ ಸುರಿದ ಭಾರೀ ಮಳೆಯಿಂದ ರಸ್ತೆಯ ಪಕ್ಕದಲ್ಲೇ ರಭಸವಾಗಿ ನೀರು ಹರಿದು ದೊಡ್ಡ ಗುಂಡಿ ಸೃಷ್ಟಿಯಾಗಿತ್ತು. ತಡರಾತ್ರಿ ತಿರುವಿನಲ್ಲಿ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಲಾರಿ ಪಲ್ಟಿಯಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಲಾರಿಯಲ್ಲಿ ಸಿಲುಕಿಕೊಂಡಿದ್ದ ಕುಣಿಗಲ್ ಮೂಲದ ಲಾರಿ ಚಾಲಕ ಜಾಫರ್, ಸಿಮ್ರಾನ್ ಮತ್ತು ಅಥಾವುಲ್ಲರನ್ನು ರಕ್ಷಿಸಿದ್ದಾರೆ. ಗಾಯಾಳುಗಳು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply