ಪುತ್ತೂರು,ಅಗಸ್ಟ್ 24: ಲವ್ ಜಿಹಾದ್ ಪ್ರಕರಣವನ್ನು ಸುಪ್ರೀಂಕೋರ್ಟ್ ಗಂಭೀರವಾಗಿ ಪರಿಗಣಿಸಿ, ಕೇರಳದ ಲವ್ ಜಿಹಾದ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ನೀಡಿದ ಬೆನ್ನಲ್ಲೇ ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಲವ್ ಜಿಹಾದ್ ಪ್ರಕರಣಗಳು ಬೆಳಕಿಗೆ ಬರುತ್ತಿವೆ.

ಪುತ್ತೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ

ಪುತ್ತೂರಿನ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ ಪ್ರಕರಣ ನಡೆದಿದೆ.

ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವಂತೆ ಒತ್ತಾಯಿಸಿದ ಇಬ್ಬರು ಯುವಕರ ವಿರುದ್ದ ಬಾಲಕಿಯ ಪೋಷಕರು ದೂರು ದಾಖಲಿಸಿದ್ದಾರೆ. ಕಲಂದರ್ ಮತ್ತು ಶಾಬಿತ್ ಎಂಬ ಇಬ್ಬರು ಯುವಕರು ಬಾಲಕಿಗೆ ಕಿರುಕುಳ ನೀಡುತ್ತಿದ್ದರು ಎಂದು ಹೇಳಲಾಗಿದೆ.

ಈ ಹಿನ್ನಲೆಯಲ್ಲಿ ಈ ಇಬ್ಬರು ಯುವಕರ ವಿರುದ್ದ ಪುತ್ತೂರು ನಗರ ಪೊಲೀಸ್ ರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಲವ್ ಜಿಹಾದ್ ಪ್ರಕರಣ

 

1 Shares

Facebook Comments

comments