DAKSHINA KANNADA
ಸಾಮಾಜಿಕ ಜಾಲತಾಣದ ಮೂಲಕ ಲವ್ ಜಿಹಾದ್ ಗೆ ಯತ್ನ ಆರೋಪಿ ಪೊಲೀಸ್ ವಶಕ್ಕೆ…!!
ಪುತ್ತೂರು ಡಿಸೆಂಬರ್ 22:ಸಾಮಾಜಿಕ ಜಾಲತಾಣದ ಮೂಲಕ ಬಾಲಕಿಯೊಬ್ಬಳಿಗೆ ಪ್ರೀತಿಸುವಂತೆ ಹಾಗೂ ಮತಾಂತರಕ್ಕೆ ಒತ್ತಾಯಿಸಿದ ಆರೋಪದ ಮೇಲೆ ಯುವಕನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಕಡಬ ತಾಲೂಕಿನ ಸವಣೂರಿನ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿರುವ ಸೊಯೂಬ್ ಕೊತ್ವಾಲ್ ಎಂದು ಗುರುತಿಸಲಾಗಿದ್ದು, ಸವಣೂರಿನ ಪೆರಿಯಡ್ಕ ಸಮೀಪದ ನಿವಾಸಿಯಾಗಿರುವ ಪಿಯುಸಿ ಓದುತ್ತಿರುವ ಬಾಲಕಿಗೆ ಸಾಮಾಜಿಕ ಜಾಲತಾಣದಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿರುವ ಆರೋಪಿ ಪ್ರೀತಿಸುವಂತೆ ಕಿರುಕುಳ ಕೊಡುತ್ತಿದ್ದ, ಅಲ್ಲದೇ ಅಸಭ್ಯವಾಗಿ ಸಂದೇಶ ರವಾನಿಸುತ್ತಿದ್ದ, ತನ್ನ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯಿಸುತ್ತಿದ್ದ ಎಂದು ಬಾಲಕಿ ಆರೋಪಿಸಿದ್ದಾಳೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣ ವೇದಿಕೆಯ ಪ್ರಮುಖರು ಯುವತಿಯ ಮನೆಗೆ ತೆರಳಿ ಈ ವಿಚಾರದ ಸತ್ಯಾಸತ್ಯತೆಯನ್ನು ತಿಳಿದ ಬಳಿಕ ಪೊಲೀಸ್ ಇಲಾಖೆಗೆ ದೂರು ನೀಡಲಾಗಿತ್ತು. ಸೋಯೂಬ್ ಯುವತಿಗೆ ಮೆಸೆಜ್ ಮೂಲಕ ಕಿರುಕುಳ ಹಾಗೂ ಉಡುಗೊರೆ ಪಡೆಯುವಂತೆ ಒತ್ತಾಯಿಸುತ್ತಿದ್ದ ಎಂಬುದು ಮೊಬೈಲ್ ಸಂದೇಶಗಳಲ್ಲಿ ತಿಳಿದುಬಂದಿದೆ.
ದೂರದ ಜಿಲ್ಲೆಯಿಂದ ಉದ್ಯೋಗ ನಿಮಿತ್ತ ಬಂದಿರುವ ಸೋಯೂಬ್ ಯುವತಿಯನ್ನು ಯಾಮಾರಿಸಿ ಲವ್ಜೆಹಾದ್ ಖೆಡ್ಡಾಗೆ ಉರುಳಿಸಲು ಪ್ರಯತ್ನಿಸಿದ್ದ ಎನ್ನಲಾಗಿದ್ದು,ಹಿಂದೂ ಯುವತಿಯರನ್ನು ಉಪಾಯವಾಗಿ ಮತಾಂತರಗೊಳಿಸುವ ಹುನ್ನಾರ ಸದ್ದಿಲ್ಲದೆ ನಡೆಯುತ್ತಿದ್ದು,ಈ ಕುರಿತು ಯುವತಿಯರು ಜಾಗರೂಕರಾಗಿರುವಂತೆ ಹಿಂದೂ ಜಾಗರಣ ವೇದಿಕೆ ವಿನಂತಿಸಿದೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿಯಲ್ಲಿ ಬಂಧಿಸಲಾಗಿದೆ.
Facebook Comments
You may like
-
ಕಟ್ಟಿಗೆಯಲ್ಲಿ ಹಲ್ಲೆ ಮಾಡಿ ತಂದೆಯನ್ನೇ ಕೊಲೆ ಮಾಡಿದ ಮಗ
-
ಅನುಮತಿ ಇಲ್ಲದೆ ಡ್ರೋನ್ ಬಳಸಿದರೆ ಕಠಿಣ ಕ್ರಮ – ಪೊಲೀಸ್ ಆಯುಕ್ತರ ಎಚ್ಚರಿಕೆ
-
ಸಹಾಯದ ನೆಪದಲ್ಲಿ ಮದ್ಯವಯಸ್ಸಿನ ಮಹಿಳೆ ಹಾಗೂ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ..ಎಸ್ ಡಿಪಿಐ ಮುಖಂಡನ ಮೇಲೆ ಪೋಕ್ಸೋ ಪ್ರಕರಣ ದಾಖಲು
-
ಪುತ್ತೂರು ಅಕ್ರಮ ಗಾಂಜಾ ಸಾಗಾಟಕ್ಕೆ ಯತ್ನ – 40 ಸಾವಿರ ಮೌಲ್ಯದ ಗಾಂಜಾ ವಶಕ್ಕೆ ಪಡೆದ ಪೊಲೀಸರು
-
ಕುಂಬಳೆ ಮೂಲದ ಯುವಕನಿಗೆ ಹನಿಟ್ರ್ಯಾಪ್ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಪೊಲೀಸ್ ವಶಕ್ಕೆ
-
13 ವರ್ಷ ಬಾಲಕಿ ಮೇಲೆ 48 ಗಂಟೆಗಳಲ್ಲಿ 9 ಕಾಮುಕರಿಂದ 13 ಬಾರಿ ರೇಪ್
You must be logged in to post a comment Login