KARNATAKA
ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಮುಂದಿನ 6 ದಿನ ರಾಜ್ಯದಲ್ಲಿ ಮಳೆ

ಬೆಂಗಳೂರು ಮೇ 01 : ಆಂಧ್ರಪ್ರದೇಶ ಭಾಗದ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿ ಹಾಗೂ ರಾಜ್ಯದಲ್ಲಿ ಉಷ್ಣಾಂಶ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂದಿನ ಆರು ದಿನಗಳವರೆಗೆ ಬೆಂಗಳೂರು, ಕರಾವಳಿ ಭಾಗ ಹಾಗೂ ಮಲೆನಾಡು ಪ್ರದೇಶದ ಕೆಲ ವೆಡೆ ಸಾಮಾನ್ಯ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಿಸಿ ಲಿನ ಬೇಗೆಯಿಂದ ಬಳಲುತ್ತಿದ್ದ ರಾಜ್ಯದಲ್ಲಿ ತಂಪೆರೆಯುವಂತೆ ಬುಧವಾರ ಹಲವೆಡೆ ಮಳೆ ಸುರಿದಿದೆ. ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಚಂಡಮಾರುತದ ಪರಿ ಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿದ ಬೀದರ್, ಕಲಬುರಗಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಕೊಡಗು, ಹಾಸನ, ತುಮಕೂರು, ಬೆಂಗಳೂರು ನಗರ, ಗ್ರಾಮಾಂತರ, ಕೋಲಾರದ ಕೆಲ ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಈ ಮಳೆ ಇನ್ನೂ ನಾಲೈದು ದಿನಗಳ ವರೆಗೆ ಮುಂದುವರಿಯಲಿದೆ. ಮಳೆ ಜತೆಗೆ ಭಾರೀ ಗಾಳಿಯೂ ಬೀಸಲಿದೆ.

ಇನ್ನೂ ಮೇ ತಿಂಗಳಲ್ಲಿ ಉಷ್ಣ ಹವೆ ಹೆಚ್ಚಾಗಿರಲಿದ್ದು, ರಾಜ್ಯದಲ್ಲಿ ಸಾಮಾನ್ಯಕ್ಕಿಂತ ಅಧಿಕವಾಗುವ ಸಾಧ್ಯತೆಯಿದೆ. ಜೊತೆಗೆ ಉತ್ತರ ಕರ್ನಾಟಕ ಭಾಗದಲ್ಲಿ ಉಷ್ಣ ಹವೆ ಹೆಚ್ಚಳವಾಗಲಿದೆ. ಭಾರತದ ಹಲವು ರಾಜ್ಯಗಳಿಗೆ ಅಧಿಕ ತಾಪಮಾನದ ಬಿಸಿ ತಟ್ಟಲಿದ್ದು, ರಾಜಸ್ಥಾನ, ಹರಿಯಾಣ, ಪಂಜಾಬ್, ಮಧ್ಯಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ತಾಪಮಾನ ಏರಿಕೆಯಾಗಲಿದೆ. ಉಷ್ಣ ಹವೆಯಿದ್ದರೂ ಕೂಡ ಉತ್ತಮ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ