LATEST NEWS
ಪೆಥಾಯ್ ಚಂಡಮಾರುತ ಎಫೆಕ್ಟ್ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡುಕ ಹುಟ್ಟಿಸಿದ ಚಳಿ

ಪೆಥಾಯ್ ಚಂಡಮಾರುತ ಎಫೆಕ್ಟ್ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡುಕ ಹುಟ್ಟಿಸಿದ ಚಳಿ
ಮಂಗಳೂರು ಡಿಸೆಂಬರ್ 19: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈ ಬಾರಿ ಕಳೆದ 10 ವರ್ಷಗಳಲ್ಲೇ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಸದಾ ಬಿಸಿ ಹವಮಾನದಲ್ಲಿರುವ ಮಂಗಳೂರಿಗರಿಗೆ ಈ ಬಾರಿ ಚಳಿ ನಡುಕ ಉಂಟು ಮಾಡಿದೆ.
ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮೊಡಕವಿದ ವಾತಾವರಣ ಹಿನ್ನಲೆ ಚಳಿಯ ಪ್ರಮಾಣ ಹೆಚ್ಚಾಗಿದೆ. ಮಂಗಳವಾರ ಬೆಳಿಗ್ಗೆ 18.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಇದು ಕಳೆದ 10 ವರ್ಷಗಳಲ್ಲಿ ಡಿಸೆಂಬರ್ ತಿಂಗಳಲ್ಲಿ ದಾಖಲಾದ ಅತಿ ಕಡಿಮೆ ಉಷ್ಣಾಂಶ ಇದಾಗಿದೆ.

1981ರಲ್ಲಿ ಡಿಸೆಂಬರ್ ತಿಂಗಳಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ದಾಖಲೆಯ 15.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ಉಷ್ಣಾಂಶ ಕಳೆದ 10 ವರ್ಷಗಳ ಅವಧಿಯಲ್ಲಿ 2008ರ ಡಿಸೆಂಬರ್ 30 ರಂದು 18.7 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು.
10 ವರ್ಷಗಳ ನಂತರ ಮಂಗಳವಾರ 18.5 ಡಿಗ್ರಿ ಉಷ್ಣಾಂಶ ದಾಖಲಾಗಿದ್ದು, ಬೆಳಿಗ್ಗೆ 9 ಗಂಟೆಯವರೆಗೂ ಗ್ರಾಮಾಂತರ ಪ್ರದೇಶಗಳಲ್ಲಿ ತೀಕ್ಷ್ಣ ಚಳಿ ಇತ್ತು. ಬೆಳಿಗ್ಗೆ ಬೇಗ ಎದ್ದು ಕೆಲಸಕ್ಕೆ ಹೋಗುವ ಬೈಕ್ ಸವರಾರು ತೀವ್ರ ಚಳಿಯ ಹೊಡೆತಕ್ಕೆ ಸಿಕ್ಕರು.
ಫೆಥಾಯ್ ಚಂಡಮಾರುತದ ಪರಿಣಾಮ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಮೋಡ ಕವಿದ ವಾತಾವರಣ ಇದ್ದು, ಇನ್ನು ಕೆಲವು ದಿನಗಳಲ್ಲಿ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.