Connect with us

    KARNATAKA

    ಬೆಂಗಳೂರು : ಸಿಲಿಂಡರ್ ಸ್ಫೋಟ, ಆರು ಜನರು ಗಾಯ- ಇಬ್ಬರು ಗಂಭೀರ..!

    ಬೆಂಗಳೂರು: ​ಮನೆಯೊಂದರಲ್ಲಿನ ಸಿಲಿಂಡರ್ ಒಂದು ಸ್ಫೋಟಗೊಂಡು ಆರು ಜನರು ಗಾಯಗೊಂಡ ಘಟನೆ ಬೆಂಗಳೂರಿನ ಯಲಹಂಕದ ಎಲ್​ಬಿಎಸ್​​ ಲೇಔಟ್ ನಲ್ಲಿ ನಡೆದಿದೆ.

     

    ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಯಲಹಂಕದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಲಿಂಡರ್ ಸ್ಫೋಟದ ತೀವ್ರತೆಗೆ ಸನಿಹದ ಐದು ಮನೆಗಳಿಗೆ ಹಾನಿಯಾಗಿದೆ.

    ಸಿಲಿಂಡರ್ ಸ್ಫೋಟಗೊಂಡ ಮನೆಯ ಇಟ್ಟಿಗೆ ಗೋಡೆಗಳೇ ಕುಸಿದುಬಿದ್ದಿವೆ. ಸ್ಫೋಟದ ತೀವ್ರತೆಗೆ ಲಾಲ್‌ಬಹದ್ದೂರ್ ಶಾಸ್ತ್ರಿ ನಗರದ ಜನತೆ ಬೆಚ್ಚಿಬಿದ್ದರು. ಅಕ್ಕ ಪಕ್ಕದ ಮೂರು ಮನೆಗಳಿಗೆ ಡ್ಯಾಮೇಜ್ ಆಗಿದೆ. ಪಸೀಯಾ ಬಾನು (50), ಸಲ್ಮಾ (22), ಶಾಹಿದ್ (16), ಅಸ್ಮಾ (50) ಅಫ್ರೋಜ್ (23) ಘಟನೆಯಲ್ಲಿ ಗಾಯಗೊಂಡವರು.ಗಾಯಾಳುಗಳಿಗೆ ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ‌ ಘಟನೆ ನಡೆದಿದೆ

    Share Information
    Advertisement
    Click to comment

    You must be logged in to post a comment Login

    Leave a Reply