Connect with us

KARNATAKA

ಸಾವಿರ ರೂಪಾಯಿ ದಾಟಿದ ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ

ಬೆಂಗಳೂರು ಮೇ 19: ಒಂದೇ ತಿಂಗಳಲ್ಲಿ ಎರಡನೇ ಬಾರಿ ಅಡುಗೆ ಅನಿಲದ ಬೆಲೆಯನ್ನು ಕೇಂದ್ರ ಸರಕಾರ ಏರಿಸಿದೆ. ಇಂದು ಗುರುವಾರದಿಂದಲೇ ಜಾರಿಗೆ ಬರುವಂತೆ 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 3.5 ರೂಪಾಯಿ ಏರಿಕೆಯಾಗಿದೆ. ಈ ಮೂಲಕ ಇಂದಿನಿಂದ ಗೃಹಬಳಕೆಯ ಸಿಲಿಂಡರ್ ಬೆಲೆ 1003 ರೂಪಾಯಿ ಆಗಿದೆ. ಈ ಮೊದಲು 999.50 ರೂಪಾಯಿಗಳಿದ್ದವು.


ವಾಣಿಜ್ಯ ಬಳಕೆ ಸಿಲಿಂಡರ್‌ಗಳ ಬೆಲೆಯನ್ನು 8 ರೂಪಾಯಿ ಹೆಚ್ಚಿಸಲಾಗಿದೆ. ಈಗ, 14.2 ಕೆಜಿ ಅಡುಗೆ ಅನಿಲ ಸಿಲಿಂಡರ್‌ ಬೆಲೆ ದೇಶಾದ್ಯಂತ ಎಲ್ಲಾ ರಾಜ್ಯಗಳಲ್ಲಿ ಸಾವಿರ ರೂಪಾಯಿ ಗಡಿಯನ್ನು ಮೀರಿದೆ.

ಒಂದು ತಿಂಗಳ ಅವಧಿಯಲ್ಲಿ ಗೃಹಬಳಕೆಯ ಸಿಲಿಂಡರ್‌ಗಳ ಬೆಲೆ ಏರಿಕೆಯಾಗುತ್ತಿರುವುದು ಇದು ಎರಡನೇ ಬಾರಿ. ಈ ಹಿಂದೆ ಮೇ 8 ರಂದು ಗೃಹಬಳಕೆಯ ಅಡುಗೆ ಅನಿಲದ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 50 ರೂಪಾಯಿಗಳಷ್ಟು ಹೆಚ್ಚಿಸಲಾಗಿತ್ತು. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಮೇ 7 ರಂದು ಪ್ರತಿ ಸಿಲಿಂಡರ್‌ಗೆ 10 ರೂಪಾಯಿ ಹೆಚ್ಚಿಸಲಾಗಿತ್ತು.

 

Advertisement
Click to comment

You must be logged in to post a comment Login

Leave a Reply