LATEST NEWS
ಮತ್ತೆ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ – ಸಾಮಾನ್ಯ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ

ಬೆಂಗಳೂರು ಸೆಪ್ಟೆಂಬರ್ 01: ಪೆಟ್ರೋಲಿಯಂ ಕಂಪೆನಿಗಳು ಗ್ಯಾಸ್ ಸಿಲಿಂಡರ್ ಬೆಲೆಯನ್ನು ಮತ್ತೆ ಏರಿಕೆ ಮಾಡಿದ್ದು, ಸಾಮಾನ್ಯ ಜನರಿಗೆ ಕೊರೊನಾ ಸಂದರ್ಭದಲ್ಲಿ ಮತ್ತೊ ಹೊಡೆತ ನೀಡಿದೆ. ಪೆಟ್ರೋಲಿಯಂ ಕಂಪೆನಿಗಳು ಎಲ್ ಪಿಜಿ ಸಿಲೆಂಡರ್ ಗಳ ದರವನ್ನು ಮತ್ತೆ 25 ರೂಪಾಯಿ ಹೆಚ್ಚಳ ಮಾಡಿವೆ. ಇದರಿಂದಾಗಿ ರಾಜಧಾನಿ ದೆಹಲಿಯಲ್ಲಿ ಈಗ ಸಬ್ಸಿಡಿಯೇತರ ಅಡುಗೆ ಅನಿಲ ಬೆಲೆ 14.2 ಕೆಜೆ ತೂಕದ ಸಿಲೆಂಡರ್ ಗೆ 884 ರೂಪಾಯಿ 50 ಪೈಸೆಯಾಗಿದೆ.
ಹೊಸ ದರ ಇಂದೇ ಜಾರಿಗೆ ಬರಲಿದೆ. ಇನ್ನು 19 ಕೆಜಿ ಕಮರ್ಷಿಯಲ್ ಸಿಲೆಂಡರ್ ಬೆಲೆ 75 ರೂಪಾಯಿ ಹೆಚ್ಚಳವಾಗಿದ್ದು ಅದಕ್ಕೆ ಗ್ರಾಹಕರು ಸಾವಿರದ 693 ರೂಪಾಯಿಯಷ್ಟು ದೆಹಲಿಯಲ್ಲಿ ದರವಿದೆ.ಕಳೆದ 15 ದಿನಗಳ ಅಂತರದಲ್ಲಿ 50 ರೂಪಾಯಿಯಷ್ಟು ಅಡುಗೆ ಅನಿಲ ದರ ಏರಿಕೆಯಾಗಿದೆ. ಕಳೆದ ಜನವರಿ 1ರಿಂದ ದೇಶದಲ್ಲಿ ಅಡುಗೆ ಅನಿಲ ಬೆಲೆ 169 ರೂಪಾಯಿಗಳಷ್ಟು ಏರಿಕೆಯಾಗಿದೆ.

ಅಡುಗೆ ಅನಿಲ ಬೆಲೆ ಏರಿಕೆಯಾದಂತೆ ಹೊಟೇಲ್ ಗಳಲ್ಲಿ ಆಹಾರ, ತಿಂಡಿ-ತಿನಿಸುಗಳ ಬೆಲೆಯೂ ಹೆಚ್ಚಳವಾಗುವುದು ಸಾಮಾನ್ಯ. ರಾಜಧಾನಿ ಬೆಂಗಳೂರಿನಲ್ಲಿ 14.2 ಕೆಜಿ ತೂಕದ ಸಬ್ಸಿಡಿಯೇತರ ಅಡುಗೆ ಅನಿಲ ಬೆಲೆ 862 ರೂಪಾಯಿ 50 ಪೈಸೆಯಾಗಿದೆ.