KARNATAKA
ವಾಣಿಜ್ಯ ಬಳಕೆಯ ಗ್ಯಾಸ್ ಬೆಲೆ 250 ರೂಪಾಯಿ ಏರಿಕೆ
ಬೆಂಗಳೂರು ಎಪ್ರಿಲ್ 1: ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯೊಂದಿಗೆ ಇದೀಗ ಎಲ್ ಪಿಜಿ ಬೆಲೆ ಏರಿಕೆಯಾಗಿದ್ದು, 19 ಕೆ.ಜಿ ತೂಕದ ವಾಣಿಜ್ಯ ಬಳಕೆಯ ಅಡುಗೆ ಅನಿಲ ದರದಲ್ಲಿ ರೂ.250 ಏರಿಕೆ ಮಾಡಲಾಗಿದ್ದು, ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬರಲಿದೆ. ಹೊಟೇಲ್ ಉದ್ಯಮಿಗಳಿಗೆ ಇದು ಭಾರೀ ಪೆಟ್ಟು ನೀಡಲಿದೆ.
ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ರೀತಿಯ ಏರಿಕೆ ಕಂಡು ಬಂದಿಲ್ಲ. ಆದರೆ, ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿರುವ ಕಾರಣ ಇದೀಗ ಗ್ರಾಹಕರು 250 ಹೆಚ್ಚುವರಿ ಸೇರಿದಂತೆ 2,253 ರೂಪಾಯಿ ಆಗಿದೆ.
ಕಳೆದ ಮಾರ್ಚ್ ತಿಂಗಳಲ್ಲಿ ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 105 ರೂಪಾಯಿ ಹೆಚ್ಚಳ ಮಾಡಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಮತ್ತೊಮ್ಮೆ ಏರಿಕೆಯಾಗಿದೆ. ಈ ನಡುವೆ ಪೆಟ್ರೋಲ್ ಮತ್ತು ಡೀಸಲ್ ದರ ಕೂಡ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 107.30 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.27 ರೂಪಾಯಿ ದಾಖಲಾಗಿದೆ. ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 115.42 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.58 ರೂಪಾಯಿ, ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 113.27 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 100.16 ರೂಪಾಯಿ ನಿಗದಿಯಾಗಿದೆ.