LATEST NEWS
ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ
ನವದೆಹಲಿ, ಏಪ್ರಿಲ್ 01: ಎಪ್ರಿಲ್ ತಿಂಗಳ ಮೊದಲ ದಿನವೇ ಕೇಂದ್ರ ಸರಕಾರ ಗುಡ್ ನ್ಯೂಸ್ ನೀಡಿದ್ದು. ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 30.50 ರೂ. ಇಳಿಕೆಯಾಗಿದೆ. ಇನ್ನು 5ಕೆಜಿ ಎಫ್ಟಿಎಲ್ ಸಿಲಿಂಡರ್ ಬೆಲೆ 7.50 ರೂಪಾಯಿ ಇಳಿಕೆಯಾಗಿದೆ.
ದೆಹಲಿಯಲ್ಲಿ 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ 30.50 ರೂ, ಮುಂಬೈನಲ್ಲಿ 31.50 ರೂ. ಚೆನ್ನೈನಲ್ಲಿ 30.50 ರೂ. ಮತ್ತು ಕೋಲ್ಕತ್ತಾದಲ್ಲಿ 32 ರೂ. ಕಡಿಮೆಯಾಗಿದೆ. ಬೆಲೆ ಇಳಿಕೆ ನಂತರ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ 1764.50 ರೂ. ಗಳಿಗೆ ಲಭ್ಯವಾಗಲಿದೆ. ಇನ್ನು ಮುಂಬೈನಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1717.50 ರೂ. ಇದೆ. ಕೋಲ್ಕತ್ತಾದಲ್ಲಿ 1879 ರೂ. ಮತ್ತು ಚೆನ್ನೈನಲ್ಲಿ 1930 ರೂ. ಮತ್ತು ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 1830 ರೂ.ಗೆ ದೊರೆಯಲಿದೆ.
ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಹಿಂದಿನ ತಿಂಗಳ ಅಂತರರಾಷ್ಟ್ರೀಯ ಮಾರುಕಟ್ಟೆಯ ಸರಾಸರಿ ಬೆಲೆಯನ್ನು ಆಧರಿಸಿ ಪ್ರತಿ ತಿಂಗಳ ಮೊದಲನೆಯ ದಿನ ಎಲ್ಪಿಜಿ ಬೆಲೆಯನ್ನು ಪರಿಷ್ಕರಿಸುತ್ತವೆ. ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.