Connect with us

    LATEST NEWS

    ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ

    ನವದೆಹಲಿ, ಏಪ್ರಿಲ್​ 01: ಎಪ್ರಿಲ್ ತಿಂಗಳ ಮೊದಲ ದಿನವೇ ಕೇಂದ್ರ ಸರಕಾರ ಗುಡ್ ನ್ಯೂಸ್ ನೀಡಿದ್ದು. ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 30.50 ರೂ. ಇಳಿಕೆಯಾಗಿದೆ. ಇನ್ನು 5ಕೆಜಿ ಎಫ್​ಟಿಎಲ್ ಸಿಲಿಂಡರ್​ ಬೆಲೆ 7.50 ರೂಪಾಯಿ ಇಳಿಕೆಯಾಗಿದೆ.


    ದೆಹಲಿಯಲ್ಲಿ 19 ಕೆಜಿ ಎಲ್​ಪಿಜಿ ಸಿಲಿಂಡರ್​ ಬೆಲೆ 30.50 ರೂ, ಮುಂಬೈನಲ್ಲಿ 31.50 ರೂ. ಚೆನ್ನೈನಲ್ಲಿ 30.50 ರೂ. ಮತ್ತು ಕೋಲ್ಕತ್ತಾದಲ್ಲಿ 32 ರೂ. ಕಡಿಮೆಯಾಗಿದೆ. ಬೆಲೆ ಇಳಿಕೆ ನಂತರ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್​ 1764.50 ರೂ. ಗಳಿಗೆ ಲಭ್ಯವಾಗಲಿದೆ. ಇನ್ನು ಮುಂಬೈನಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್​ ಬೆಲೆ 1717.50 ರೂ. ಇದೆ. ಕೋಲ್ಕತ್ತಾದಲ್ಲಿ 1879 ರೂ. ಮತ್ತು ಚೆನ್ನೈನಲ್ಲಿ 1930 ರೂ. ಮತ್ತು ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್​ ಬೆಲೆ 1830 ರೂ.ಗೆ ದೊರೆಯಲಿದೆ.

    ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಹಿಂದಿನ ತಿಂಗಳ ಅಂತರರಾಷ್ಟ್ರೀಯ ಮಾರುಕಟ್ಟೆಯ ಸರಾಸರಿ ಬೆಲೆಯನ್ನು ಆಧರಿಸಿ ಪ್ರತಿ ತಿಂಗಳ ಮೊದಲನೆಯ ದಿನ ಎಲ್​ಪಿಜಿ ಬೆಲೆಯನ್ನು ಪರಿಷ್ಕರಿಸುತ್ತವೆ. ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

    Share Information
    Advertisement
    Click to comment

    You must be logged in to post a comment Login

    Leave a Reply