LATEST NEWS
ಪೆಟ್ರೋಲ್ ನಂತರ ಈಗ ಎಲ್ ಪಿಜಿ ಸರದಿ – ಸಿಲಿಂಡರ್‌ಗೆ ₹50 ಏರಿಕೆ!
ಹೊಸದಿಲ್ಲಿ: ದೇಶದಲ್ಲಿ ಪೆಟ್ರೋಲ್ ಡಿಸೇಲ್ ಜನರ ಜೇಬು ಸುಡುತ್ತಿರುವ ನಡುವೆ ಇದೀಗ ಎಲ್ ಪಿಜಿ ಗ್ರಾಹಕರಿಗೂ ಬೆಲೆ ಏರಿಕೆಯ ಬಿಸಿ ತಟ್ಟಲಾರಂಭಿಸಿದೆ. ಕೆಲ ದಿನಗಳ ಹಿಂದಷ್ಟೇ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಲಾಗಿತ್ತು. ಇದೀಗ ಗೃಹಬಳಕೆ ಸಿಲಿಂಡರ್ ಬೆಲೆಯಲ್ಲೂ ಹೆಚ್ಚಳ ಮಾಡಿರುವ ತೈಲ ಕಂಪನಿಗಳು ಗ್ರಾಹಕರಿಕೆ ಮತ್ತೆ ಶಾಕ್ ನೀಡಿವೆ.
ಗೃಹಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ಗಳ ಬೆಲೆಯಲ್ಲಿ ಬರೋಬ್ಬರಿ 50 ರೂಪಾಯಿ ಹೆಚ್ಚಿಸಲಾಗಿದೆ. 5 ಕೆಜಿ ಗೃಹಳಕೆಯ ಸಿಲಿಂಡರ್ ಬೆಲೆಯಲ್ಲೂ 18 ರೂಪಾಯಿ ಏರಿಸಲಾಗಿದೆ. ಕಮರ್ಷಿಯಲ್ ಸಿಲಿಂಡರ್ ಬೆಲೆಯಲ್ಲೂ ಏರಿಕೆಯಾಗಿದ್ದು, 19 ಕೆಜಿ ಕಮರ್ಷಿಯಲ್ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಬರೋಬ್ಬರಿ 36.50 ರೂಪಾಯಿ ಹೆಚ್ಚಿಸಲಾಗಿದೆ. ಗೃಹಬಳಕೆ (14.2 ಕೆಜಿ) ಸಿಲಿಂಡರ್ ದಿಲ್ಲಿಯಲ್ಲಿ 644ರೂ, ಕೋಲ್ಕತ – 670.50 ರೂ. ಮುಂಬಯಿ: 644 ರೂ., ಚೆನ್ನೈ: 660ರೂ. ಆಗಿದೆ.
ಈಗಾಗಲೇ ಕೇಂದ್ರ ಸರಕಾರ ಎಲ್‌ಪಿಜಿ ಸಿಲಿಂಡರ್ ಮೇಲಿನ ಸಬ್ಸಿಡಿಯನ್ನು ಪೂರ್ಣವಾಗಿ ಸ್ಥಗಿತಗೊಳಿಸಿದ್ದು. ಸಬ್ಸಿಡಿ ಮತ್ತು ಸಬ್ಸಿಡಿಯೇತರ ಎಲ್ಲ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲೂ ಏಕರೂಪತೆ ತಂದಿದೆ.ದೇಶದಲ್ಲಿ ಸುಮಾರು 45 ಕೋಟಿ ಎಲ್‌ಪಿಜಿ ಗ್ರಾಹಕರಿದ್ದಾರೆ.