LATEST NEWS
ಗೃಹ ಬಳಕೆಯ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳ
ನವದೆಹಲಿ: ಗೃಹ ಬಳಕೆಯ ಅಡುಗೆ ಸಿಲಿಂಡರ್ ಬೆಲೆ ಹೆಚ್ಚಳವಾಗಿದ್ದು, ಕೇಂದ್ರ ಸರಕಾರ ಗ್ರಾಹಕರಿಗೆ ಮತ್ತೆ ಬರೆ ಎಳೆದಿದೆ. 14.2 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳವಾಗಿದ್ದು, ನೂತನ ದರ ಇಂದಿನಿಂದ ಜಾರಿಗೆ ಬರಲಿದೆ.
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ 1053 ರೂ. ಆಗಿದ್ದು, 5 ಕೆಜಿಯ ಸಣ್ಣ ದೇಶೀಯ ಸಿಲಿಂಡರ್ ಬೆಲೆಯೂ ಹೆಚ್ಚಾಗಿದೆ. ಇದರ ಬೆಲೆಯನ್ನು ಪ್ರತಿ ಸಿಲಿಂಡರ್ಗೆ 18 ರೂ.ಯಷ್ಟು ಹೆಚ್ಚಿಸಲಾಗಿದೆ. ಮತ್ತೊಂದೆಡೆ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 8.50 ರೂ ಇಳಿಕೆಯಾಗಿದೆ.
ಜುಲೈ 1ರಿಂದ 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ಪ್ರತಿ ಸಿಲಿಂಡರ್ಗೆ 198 ರೂಪಾಯಿ ಕಡಿಮೆ ಮಾಡಲಾಯಿತು. ಇದಕ್ಕೂ ಮುನ್ನ ಜೂನ್ನಲ್ಲಿ 19 ಕೆಜಿ ವಾಣಿಜ್ಯ ಬಳಕೆ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಪ್ರತಿ ಸಿಲಿಂಡರ್ಗೆ 135 ರೂಪಾಯಿ ಇಳಿಕೆಯಾಗಿತ್ತು