LATEST NEWS
ಮಾಬುಕಳ – ಭೀಕರ ರಸ್ತೆ ಅಪಘಾತಕ್ಕೆ ಮಹಿಳೆ ಬಲಿ

ಬ್ರಹ್ಮಾವರ ಎಪ್ರಿಲ್ 04: ಟಿಪ್ಪರ್ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿ ಮಹಿಳೆ ಸಾವನಪ್ಪಿ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮಾಬುಕಳ ಸೇತುವೆ ಬಳಿ ಗುರುವಾರ ನಡೆದಿದೆ.
ಮೃತರನ್ನು ಮಮ್ತಾಜ್ ಎಂದು ಗುರುತಿಸಲಾಗಿದೆ. ಬಾರ್ಕೂರಿನಿಂದ ಸಾಸ್ತಾನ ಕಡೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ಕೂಟರ್‌ನಲ್ಲಿ ಸಾಗುತ್ತಿದ್ದ ವೇಳೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮಮ್ತಾಜ್ ಮತ್ತು ಪೂರ್ಣಿಮಾ ಗಾಯಗೊಂಡಿದ್ದರು, ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಮಮ್ರಾಜ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಟಿಪ್ಪರ್ ಚಾಲಕ ಲಾರಿಯೊಡನೆ ಪರಾರಿಯಾಗಿದ್ದಾನೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

3 Comments