Connect with us

    DAKSHINA KANNADA

    ಸಂಪರ್ಕ ರಸ್ತೆ ರಿಪೇರಿಗೆ ಆಗ್ರಹಿಸಿ ಮಡ್ಯಡ್ಕ ಜನತಾ ಕಾಲೋನಿ ನಿವಾಸಿಗಳಿಂದ ಚುನಾವಣಾ ಬಹಿಷ್ಕಾರಕ್ಕೆ ನಿರ್ಧಾರ

    ಸಂಪರ್ಕ ರಸ್ತೆ ರಿಪೇರಿಗೆ ಆಗ್ರಹಿಸಿ ಮಡ್ಯಡ್ಕ ಜನತಾ ಕಾಲೋನಿ ನಿವಾಸಿಗಳಿಂದ ಚುನಾವಣಾ ಬಹಿಷ್ಕಾರಕ್ಕೆ ನಿರ್ಧಾರ

    ಪುತ್ತೂರು ಎಪ್ರಿಲ್ 3: ಸಂಪರ್ಕ ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯಗಳ ದೊರೆಯದ ಹಿನ್ನಲೆಯಲ್ಲಿ ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಮಡ್ಯಡ್ಕ ಜನತಾ ಕಾಲೋನಿ ನಿವಾಸಿಗಳಿಂದ ಚುನಾವಣೆ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ.

    ನೂಜಿಬಾಳ್ತಿಲ ಗ್ರಾಮದ 2ನೇ ವಾರ್ಡ್ ವ್ಯಾಪ್ತಿಯಲ್ಲಿರುವ ಈ ರಸ್ತೆಯನ್ನು ಡಾಮರಿಕರಣಗೊಳಿಸಲು ಈ ಭಾಗದ ಜನರು ಹಲವು ವರ್ಷಗಳಿಂದ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ, ಗ್ರಾಮ ಸಭೆಗಳಲ್ಲಿ ಮನವಿ ಮಾಡುತ್ತಾ ಬಂದಿದ್ರು. ಆದರೆ, ಭರವಸೆ ದೊರೆತರೂ ಅಭಿವೃದ್ದಿ ಮಾತ್ರ ಮರೀಚಿಕೆಯಾಗಿತ್ತು. ಹಾಗಾಗಿ ಈ ಬಾರಿ ಮತದಾನ ಬಹಿಷ್ಕರಿಸುವ ದಿಟ್ಟ ನಿರ್ಧಾರಕ್ಕೆ ಬರಲಾಗಿದೆ ಎನ್ನುತ್ತಾರೆ ಈ ಭಾಗದ ಜನತೆ.

    ಸುಮಾರು 6 ಕಿಮೀ ನಷ್ಟು ಉದ್ದದ ಈ ರಸ್ತೆಯನ್ನು ಸುಮಾರು 100ಕ್ಕೂ ಹೆಚ್ಚು ಕಟುಂಬಗಳು ಆಶ್ರಯಿಸಿದೆ. ಮಳೆಗಾಲದಲ್ಲಿ ಕೆಸರುಮಯ, ಬೇಸಿಗೆಯಲ್ಲಿ ದೂಳಿನಿಂದ ಆವೃತವಾಗಿ ವಾಹನ ಸಂಚಾರಕ್ಕೆ, ಪಾದಚಾರಿಗಳು ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆಯನ್ನು ದುರಸ್ಥಿಗೊಳಿಸುವವರೆಗೆ ಚುನಾವಣೆಯಲ್ಲಿ ಭಾಗವಹಿಸುವುದಿಲ್ಲ ಎಂದು ಗ್ರಾಮಸ್ಥರು ಪಟ್ಟುಹಿಡಿದಿದ್ದಾರೆ.

    ಈ ರಸ್ತೆಯನ್ನು ಡಾಮರೀಕರಣಗೊಳಿಸುವಂತೆ ಒತ್ತಾಯಿಸಿ 2018ರ ವಿಧಾನಸಭಾ ಚುನಾವಣೆಯನ್ನು ಇಲ್ಲಿನ ಜನರು ಬಹಿಷ್ಕರಿಸಿದ್ದರು. ಆ ಸಮಯದಲ್ಲಿ ವಿವಿಧ ಪಕ್ಷಗಳ ಮುಖಂಡರು ಇಲ್ಲಿಗೆ ಆಗಮಿಸಿ ರಸ್ತೆಯನ್ನು ದುರಸ್ತಿ ಮಾಡುವ ಭರವಸೆ ನೀಡಿದ್ದರು. ಆದರೆ ಈ ಭರವಸೆ ಈವರೆಗೂ ಈಡೇರದ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿ ಈ ಭಾರಿ ಮತ್ತೊಮ್ಮೆ ಚುನಾವಣೆ ಬಹಿಷ್ಕಾರ ಮಾಡಲು ನಿರ್ಧರಿಸಿದ್ದಾರೆ. ಕಡಬ ತಹಶಿಲ್ದಾರರು ಹಾಗೂ ಚುನಾವಣಾ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಇಲ್ಲಿನ‌ ಜನರ ಮನವೊಳಿಸಲು ಯತ್ನಿಸಿದರೂ ಪ್ರಯತ್ನ ವಿಫಲವಾಗಿದೆ ಎನ್ನಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply