KARNATAKA
ಕಚೇರಿಯಲ್ಲಿ ರಾಸಲೀಲೆ – ಮಧುಗಿರಿಯ ಡಿವೈಎಸ್‌ಪಿ ರಾಮಚಂದ್ರಪ್ಪ ಅರೆಸ್ಟ್
ಬೆಂಗಳೂರು ಜನವರಿ 03: ದೂರು ನೀಡಲು ಬಂದ ಮಹಿಳೆಯ ಜೊತೆ ಕಚೇರಿಯಲ್ಲೇ ರಾಸಲೀಲೆ ನಡೆಸಿದ್ದ ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್‌ಪಿ ರಾಮಚಂದ್ರಪ್ಪ ಅರೆಸ್ಟ್ ಮಾಡಲಾಗಿದೆ.
ಜಮೀನು ವ್ಯಾಜ್ಯದ ವಿಚಾರಕ್ಕೆ ಪಾವಗಡದಿಂದ ದೂರು ನೀಡಲು ಬಂದಿದ್ದ ಮಹಿಳೆಯನ್ನು ಪುಸಲಾಯಿಷಿ ಆಕೆಯೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದು, ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಮಧುಗಿರಿಯ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಅಮಾನತು ಮಾಡಿ ಡಿಜಿ, ಐಜಿಪಿ ಅಲೋಕ್ ಮೋಹನ್ ಆದೇಶಿಸಿದ್ದರು. ಇದರ ಬೆನ್ನಲ್ಲೇ ಇದೀಗ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.
ಮಹಿಳೆ ನೀಡಿದ ದೂರಿನ ಮೇರೆಗೆ ಅತ್ಯಾಚಾರ ಕೇಸ್ ಅಡಿಯಲ್ಲಿ ಮಧುಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈ ದೂರಿನ ಮೇರೆಗೆ ಇದೀಗ ಮಧುಗಿರಿ ಉಪವಿಭಾಗ ಡಿವೈಎಸ್ ಪಿ ರಾಮಚಂದ್ರಪ್ಪನನ್ನು ಅರೆಸ್ಟ್ ಮಾಡಲಾಗಿದೆ.