Connect with us

    KARNATAKA

    ಮಡಿಕೇರಿ – ವೀರ ಸೇನಾನಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆಗೆ ಗುದ್ದಿದ ಕೆಎಸ್ಆರ್ ಟಿಸಿ ಬಸ್

    ಮಡಿಕೇರಿ ಅಗಸ್ಟ್ 21: ಕೆಎಸ್ಆರ್ ಟಿಸಿ ಬಸ್ ಒಂದು ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತಕ್ಕೆ ಗುದ್ದಿದ ಪರಿಣಾಮ ವೀರ ಸೇನಾನಿ ತಿಮ್ಮಯ್ಯ ಅವರ ಪ್ರತಿಮೆ ನೆಲಕ್ಕೆ ಉರುಳಿದ ಘಟನೆ ನಡೆದಿದೆ.


    ಮಡಿಕೇರಿ ಡಿಪೋದಿಂದ ಬಸ್ ನಿಲ್ದಾಣದ ಕಡೆ ಹೊರಟಿದ್ದ ಕೆಎಸ್ಆರ್ ಟಿಸಿ ಬಸ್ ಗೆ ಪಿಕಪ್ ವಾಹನವೊಂದು ಅಡ್ಡ ಬಂದಿದ್ದು, ಅಪಘಾತ ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡ ಬಸ್ ಚಾಲಕ ಜನರಲ್ ತಿಮ್ಮಯ್ಯ ಪ್ರತಿಮೆಗೆ ಡಿಕ್ಕಿ ಹೊಡೆದಿದ್ದಾನೆ. ಅದೃಷ್ಟವಶಾತ್ ಬಸ್‌ನಲ್ಲಿ ಪ್ರಯಾಣಿಕರಿಲ್ಲದ್ದರಿಂದ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕ ಹಾಗೂ ಕಾರ್ಯನಿರ್ವಾಹಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದು, ಬಸ್ ಚಾಲಕ ಕೊಟ್ರೇಶ್‌ನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದು, ಬಸ್ ಅನ್ನು ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply