Connect with us

    LATEST NEWS

    ಬಸ್ ಗೆ ಕಾಯುತ್ತಿದ್ದವರ ಮೇಲೆ ಹರಿದ ಲಾರಿ – 6 ಮಂದಿ ಸಾವು

    ಮಧ್ಯಪ್ರದೇಶ ಡಿಸೆಂಬರ್ 05: ರಸ್ತೆ ಬದಿ ಬಸ್ ಕಾಯುತ್ತಿದ್ದ ಜನರ ಮೇಲೆ ಟ್ರಕ್ ಹರಿದ ಪರಿಮಾಮ ಇಬ್ಬರು ಮಹಿಳೆಯರು ಸೇರಿದಂತೆ 6 ಮಂದಿ ಸಾವನಪ್ಪಿರುವ ಧಾರುಣ ಘಟನೆ ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ನಡೆದಿದೆ.


    ಭಾನುವಾರ ಸಂಜೆ ಈ ಅಪಘಾತ ಸಂಭವಿಸಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಎಂಟು ಮಂದಿಯ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಟ್ರಕ್ ನ ಚಕ್ರ ಸ್ಫೋಟಗೊಂಡ ಹಿನ್ನಲೆ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿಯಾಗಿ ಚಲಿಸಿದೆ. ಈ ವೇಳೆ ರಸ್ತೆ ಬದಿ ಬಸ್ ಗಾಗಿ ಕಾಯುತ್ತಿದ್ದವರ ಮೇಲೆ ಟ್ರಕ್ ಹರಿದಿದ್ದು, 6 ಮಂದಿ ಸಾವನಪ್ಪಿದ್ದಾರೆ.


    ರತ್ಲಾಂ ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿ.ಮೀ. ದೂರದಲ್ಲಿ ಸಾತ್ರುಂಡಾ ಗ್ರಾಮದ ರತ್ಲಾಂ-ಲೆಬಾದ್ ರಸ್ತೆಯಲ್ಲಿ ಅವಘಡ ಸಂಭವಿಸಿದೆ. ಟ್ರಕ್ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ತಿವಾರಿ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply